ಇಮ್ರಾನ್ ಸ್ವಿಂಗ್

Latest News

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಗಂಡಸಿ ಗ್ರಾಮದಲ್ಲಿ ಕಾರ್ತಿಕ‌ ಮಹೋತ್ಸವ

ಅರಸೀಕೆರೆ:ತಾಲೂಕಿನ ಗಂಡಸಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇಗುಲದ ಆವರಣದಲ್ಲಿ ಕಾರ್ತಿಕ ಮಹೋತ್ಸವ ಆಯೋಜಿಸಲಾಗಿತ್ತು. ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ಶ್ರೀ ವೀರಸೋಮೇಶ್ವರ ಪ್ರಸನ್ನ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು...
<< ಪಾಕ್ ಚುನಾವಣೆಯಲ್ಲಿ ಭಾರಿ ಮುನ್ನಡೆ >>

ಇಸ್ಲಾಮಾಬಾದ್: ಉಗ್ರ ದಾಳಿ, ವ್ಯಾಪಕ ಹಿಂಸಾಚಾರ ನಡುವೆಯೇ ಬುಧವಾರ ಪಾಕಿಸ್ತಾನ ಸಾರ್ವತ್ರಿಕ ಚುನಾವಣೆ ಮತದಾನ ಅಂತ್ಯಗೊಂಡಿದ್ದು, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷ ಆರಂಭಿಕ ಮುನ್ನಡೆ ಸಾಧಿಸಿದೆ.

ಮತದಾನ ಮುಕ್ತಾಯಗೊಂಡ ಕೆಲವು ಗಂಟೆ ಬಳಿಕ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಪ್ರಧಾನಿ ನವಾಜ್ ಷರೀಫ್​ರ ಪಿಎಂಎಲ್-ಎನ್ ಪಕ್ಷ ಹಿನ್ನಡೆ ಕಂಡಿದೆ. ಬಿಲಾವಲ್ ಭುಟ್ಟೊ ನಾಯಕತ್ವದ ಪಿಪಿಪಿ ಮೂರನೇ ಸ್ಥಾನದಲ್ಲಿದ್ದರೆ, ಇತರ ಸಣ್ಣಪಕ್ಷಗಳ ಅಭ್ಯರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಮುನ್ನಡೆ ಸಾಧಿಸಿರುವುದರಿಂದ ಸರ್ಕಾರ ರಚನೆಯಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆಯಿದೆ. 5 ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಇಮ್ರಾನ್ ಖಾನ್ ಎಲ್ಲ ಕಡೆ ಮುನ್ನಡೆ ಸಾಧಿಸಿದ್ದಾರೆ.

ಷರೀಫ್​ಗೆ ಮುಖಭಂಗ

ಸಿಂಧ್ ಪ್ರಾಂತ್ಯದಲ್ಲಿ ಪಿಪಿಪಿ ಹೆಚ್ಚಿನ ಸಂಖ್ಯೆಯಲ್ಲಿ ಮುನ್ನಡೆ ಸಾಧಿಸಿದೆ. ಪಿಎಂಎಲ್-ಎನ್ ಭದ್ರಕೋಟೆ ಎಂದು ಹೇಳಲಾಗುತ್ತಿರುವ ಪಂಜಾಬ್ ಪ್ರಾಂತ್ಯದಲ್ಲಿ ಪಿಟಿಐ ಮೇಲುಗೈ ಸಾಧಿಸಿದೆ. ಪಿಟಿಐ 38 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಪಿಎಂಎಲ್-ಎನ್ 24 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ಷರೀಫ್ ಭಾರಿ ಮುಖಭಂಗ ಅನುಭವಿಸಿದ್ದಾರೆ.

ಭಾರತಕ್ಕೆ ಆತಂಕ

ಇಮ್ರಾನ್ ಖಾನ್ ಪ್ರಧಾನಿಗಾದಿಗೇರಿದರೆ ಭಾರತಕ್ಕೆ ಲಾಭಕ್ಕಿಂತ ಆತಂಕವೇ ಹೆಚ್ಚು ಎಂಬ ಮಾತು ಕೇಳಿಬರುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕ್ ಅನುಭವಿಸುತ್ತಿರುವ ಮುಜುಗರ, ಹಿನ್ನಡೆಗೆ ದೆಹಲಿಯೇ ಸಂಚುಕೋರ ಎಂದು ಇಮ್ರಾನ್ ಆರೋಪಿಸಿದ್ದಾರೆ. ಜತೆಗೆ ಪಾಕ್ ಸೇನೆ ಜತೆ ಇಮ್ರಾನ್ ಹೊಂದಿರುವ ಬಾಂಧವ್ಯ ಕೂಡ ಭಾರತಕ್ಕೆ ಮುಳುವಾಗಬಹುದೆಂದು ವಿಶ್ಲೇಷಿಸಲಾಗುತ್ತಿದೆ.

ಪಿಟಿಐ ಸಂಭ್ರಮ

ಆರಂಭಿಕ ಮುನ್ನಡೆ ಸಾಧಿಸುತ್ತಿದ್ದಂತೆ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಕಾರ್ಯಕರ್ತರು ಸಂಭ್ರಮ ಆಚರಿಸಿದ್ದಾರೆ.

  • ಚುನಾಯಿತ ಸದಸ್ಯರು – 272
  • ನಾಮನಿರ್ದೇಶನ ಸಹಿತ – 342
  • ಬಹುಮತಕ್ಕೆ ಅಗತ್ಯ – 172

ಹಿಂಸೆ ಮಧ್ಯೆ ಮತದಾನ

ಇಸ್ಲಾಮಾಬಾದ್: ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯ ಮತದಾನ ವೇಳೆ ಭಾರಿ ಹಿಂಸಾಚಾರ ಸಂಭವಿಸಿದ್ದು, ಕ್ವೆಟ್ಟಾ ಪ್ರದೇಶದಲ್ಲಿ ಶಂಕಿತ ಐಸಿಸ್ ಉಗ್ರರ ದಾಳಿಗೆ 35ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಪಾಕಿಸ್ತಾನದ ವಿವಿಧೆಡೆ ನಡೆದ ಗಲಭೆ, ಹಿಂಸೆಯಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ.

ಬೆಳಗ್ಗೆ 8 ಗಂಟೆಗೆ ಆರಂಭವಾದ ಮತದಾನ, ಸಂಜೆ 6 ಗಂಟೆಗೆ ಮುಕ್ತಾಯವಾಯಿತು. ಬೆಳಗ್ಗೆ 7 ಗಂಟೆಯಿಂದಲೇ ಮತಗಟ್ಟೆ ಎದುರು ಜನರು ಹಕ್ಕುಚಲಾಯಿಸಲು ಸಾಲಿನಲ್ಲಿ ನಿಂತಿದ್ದರು. ಮತದಾನ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿದ ಕಾರಣ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಪ್ರಮುಖ ರಾಜಕೀಯ ಪಕ್ಷಗಳು ಆಗ್ರಹಿಸಿದವು. ಆದರೆ ಅಲ್ಲಿನ ಚುನಾವಣಾ ಆಯೋಗ ಇದಕ್ಕೆ ಅವಕಾಶ ನೀಡಲಿಲ್ಲ.

ಪಾಕಿಸ್ತಾನದ ಸೇನಾ ಮುಖ್ಯಸ್ಥ ಖಮರ್ ಬಾಜ್ವಾ, ಪಿಎಂಎಲ್-ಎನ್ ಅಧ್ಯಕ್ಷ ಶಹಬಾಜ್ ಷರೀಫ್, ಪಿಟಿಐ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಸಹಿತ ಪ್ರಮುಖರು ಮತ ಚಲಾಯಿಸಿದರು. ಮಾಜಿ ಪ್ರಧಾನಿ ನವಾಜ್ ಷರೀಫ್, ಪುತ್ರಿ ಮರಿಯಮ್ ಜೈಲಲ್ಲಿರುವ ಕಾರಣ ಮತ ಚಲಾಯಿಸಲು ಸಾಧ್ಯವಾಗಲಿಲ್ಲ.

ಭಾರಿ ಹಿಂಸಾಚಾರ: ಮತದಾನ ಆರಂಭವಾದ ಒಂದು ಗಂಟೆಯಲ್ಲೇ ಐಸಿಸ್​ನ ಶಂಕಿತ ಉಗ್ರನೊಬ್ಬ ಬಲೂಚಿಸ್ತಾನದ ಕ್ವೆಟ್ಟಾದಲ್ಲಿನ ಬೋಸಾ ಮಂಡಿ ಮತಗಟ್ಟೆ ಹೊರಭಾಗದಲ್ಲಿ ಆತ್ಮಾಹುತಿ ದಾಳಿ ನಡೆಸಿದ್ದಾನೆ. ಭದ್ರತಾ ಸಿಬ್ಬಂದಿ ಸಹಿತ 35ಕ್ಕೂ ಹೆಚ್ಚು ಜನರು ಮೃತರಾಗಿದ್ದಾರೆ. ಪ್ರತ್ಯೇಕ ಹಿಂಸಾಚಾರ ಘಟನೆಯಲ್ಲಿ ಮೂವರು ಪೊಲೀಸರು ಸಹಿತ ನಾಲ್ವರು ಮೃತಪಟ್ಟಿದ್ದಾರೆ. ಹಲವು ಮತಗಟ್ಟೆಗಳ ಹೊರಭಾಗದಲ್ಲಿ ಪ್ರಮುಖ ಪಕ್ಷಗಳ ಬೆಂಬಲಿಗರ ನಡುವೆ ಘರ್ಷಣೆ ನಡೆದು, ಹಲವರು ಗಾಯಗೊಂಡಿದ್ದಾರೆ.

ಹೇಗಿದೆ ಪಾಕಿಸ್ತಾನದ ಸಂಸತ್?

ಪಾಕಿಸ್ತಾನದ ಸಂಸತ್ 342 ಸದಸ್ಯರನ್ನು ಹೊಂದಿದೆ. ಇದರಲ್ಲಿ 272 ಸದಸ್ಯರು ಜನರಿಂದ ನೇರವಾಗಿ ಚುನಾಯಿತರಾಗುತ್ತಾರೆ. ಮಹಿಳೆಯರಿಗೆ 60, ಧಾರ್ವಿುಕ ಅಲ್ಪಸಂಖ್ಯಾತರಿಗೆ 10 ಸ್ಥಾನ ಮೀಸಲಾತಿ ಇದೆ. ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಈ ಸ್ಥಾನಗಳಿಗೆ ಆಯ್ಕೆ ನಡೆಯಲಿದೆ. ಹೀಗಾಗಿ ಒಟ್ಟು 172 ಸದಸ್ಯರನ್ನು ಹೊಂದಿದ ಪಕ್ಷ ಅಧಿಕಾರಕ್ಕೆ ಬರಲಿದೆ.

ದಿನದ ಬೆಳವಣಿಗೆ

  • ತೆಹ್ರೀಕ್ ಎ ಇನ್ಸಾಫ್ ಪಕ್ಷದ ನಾಯಕ, ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್​ಗೆ ಪಾಕ್ ಚುನಾವಣಾ ಆಯೋಗ ಸಮನ್ಸ್ ಜಾರಿ ಮಾಡಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಸ್ವಕ್ಷೇತ್ರವಾದ ಇಸ್ಲಾಮಾಬಾದ್​ನ ಮತಗಟ್ಟೆಯೊಂದರಲ್ಲಿ ಮಾಧ್ಯಮಗಳ ಎದುರು ಬಹಿರಂಗವಾಗಿ ಅವರು ಮತದಾನ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ್ದರು.
  • ಮತ ಎಣಿಕೆ ಆರಂಭವಾಗುತ್ತಿದ್ದಂತೆ ಮಾಧ್ಯಮಗಳ ಮೇಲೆ ಪಾಕಿಸ್ತಾನ ಸೇನೆ ನಿರ್ಬಂಧ ಹೇರಿತು.
  • ಇಸ್ಲಾಮಾಬಾದ್​ನ ಕೆಲ ಮತಗಟ್ಟೆಗಳಲ್ಲಿ ಹಿಂದು, ಕ್ರಿಶ್ಚಿಯನ್, ಅಹಮದೀಯರು ಸೇರಿ ಧಾರ್ವಿುಕ ಅಲ್ಪಸಂಖ್ಯಾತರಿಗೆ ಮತದಾನಕ್ಕೆ ಅವಕಾಶ ನೀಡಿಲ್ಲ ಎಂಬ ವರದಿ.
- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...