More

    ಮುಂಬೈ ತಂಡ ಸೇರಿದ ಸೂರ್ಯಕುಮಾರ್ : ಕುಲದೀಪ್‌ಗೆ ರೆಸ್ಟ್

    ಮುಂಬೈ: ಸತತ ಸೋಲುಗಳಿಂದ ಕಂಗೆಟ್ಟಿರುವ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್‌ಗೆ ಭಾನುವಾರದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂದ್ಯಕ್ಕೂ ಮುನ್ನ ಬಲ ಸಿಕ್ಕಿದೆ. ಗಾಯ ಹಾಗೂ ಫಿಟ್ನೆಸ್ ಸಮಸ್ಯೆಯಿಂದ ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದ ವಿಶ್ವ ನಂ.1 ಟಿ20 ಬ್ಯಾಟರ್ ಸೂರ್ಯಕುಮಾರ್ ಯಾದವ್ ಶುಕ್ರವಾರ ಮುಂಬೈ ತಂಡ ಸೇರ್ಪಡೆಯಾಗಿದ್ದು, ನೆಟ್ಸ್‌ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಶಸ ಚಿಕಿತ್ಸೆಯ ಬಳಿಕ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಬಳಿಕ ಸೂರ್ಯ ಐಪಿಎಲ್‌ನಲ್ಲಿ ಕಣಕ್ಕಿಳಿಯುಲು ಸಿದ್ಧರಾಗಿದ್ದಾರೆ. ವಾಂಖೆಡೆ ಕ್ರೀಡಾಂಗಣದಲ್ಲಿ ಗಂಟೆಗೂ ಅಧಿಕ ಸಮಯ ಅಭ್ಯಾಸ ನಡೆಸಿದ ಸೂರ್ಯ ಉತ್ತಮ ಲಯದಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.\

    ಆಡಿರುವ ಮೂರು ಪಂದ್ಯಗಳಲ್ಲಿ ಸೋತು ಟೂರ್ನಿಯ ಅಂಕಪಟ್ಟಿಯಲ್ಲಿ ಕೊನೇ ಸ್ಥಾನ ಪಡೆದಿರುವ ಮುಂಬೈಗೆ ಸೂರ್ಯ ಆಗಮನ ಹೊಸ ಶಕ್ತಿ ತುಂಬುವ ಸಾಧ್ಯತೆಗಳಿವೆ. 33 ವರ್ಷದ ಸೂರ್ಯ ಜನವರಿಯಿಂದ ಸ್ಫರ್ಧಾತ್ಮಕ ಕ್ರಿಕೆಟ್‌ನಿಂದ ದೂರವುಳಿದಿದ್ದು, ಕಳೆದ ಡಿಸೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಪಾದದ ಗಾಯಕ್ಕೆ ತುತ್ತಾಗಿ ನಂತರ ಶಸ ಚಿಕಿತ್ಸೆಗೆ ಒಳಪಟ್ಟಿದ್ದರು.

    ಮುನ್ನೆಚ್ಚರಿಕೆ ಕ್ರಮ, ಕುಲದೀಪ್‌ಗೆ ರೆಸ್ಟ್: ಮುಂಬೈ: ತೊಡೆಸಂದು ಸ್ನಾಯುಸೆಳೆತದಿಂದ ಬಳಲುತ್ತಿರುವ ಸ್ಪಿನ್ನರ್ ಕುಲದೀಪ್ ಯಾದವ್‌ಗೆ ಮುನ್ನೆಚ್ಚರಿಕೆಯ ಕ್ರಮವಾಗಿ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಂದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ. ಮಾ.28ರಂದು ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಸ್ನಾಯುಸೆಳೆತಕ್ಕೆ ತುತ್ತಾಗಿದ್ದ 29 ವರ್ಷದ ಕುಲದೀಪ್, ನಂತರದ 2 ಪಂದ್ಯಗಳಿಂದ ಹೊರಗುಳಿದಿದ್ದರು. ಕುಲದೀಪ್ ಸಂಪೂರ್ಣವಾಗಿ ಫಿಟ್ ಆಗಲು ಕೆಲ ಸಮಯ ಹಿಡಿಯಲಿದ್ದು, ಬಿಸಿಸಿಐ ವಾರ್ಷಿಕ ಗುತ್ತಿಗೆ ಪಡೆದಿರುವ ಆಟಗಾರರ ಬಗ್ಗೆ ್ರಾಂಚೈಸಿಗಳು ಬೆಂಗಳೂರಿನ ಎನ್‌ಸಿಎಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಆಡಿರುವ 2 ಪಂದ್ಯಗಳಲ್ಲಿ ಕುಲದೀಪ್ 3 ವಿಕೆಟ್ ಕಬಳಿಸಿದ್ದಾರೆ. ಮುಂಬರುವ ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾ ಆಟಗಾರರು ಫಿಟ್ನೆಸ್ ಕಾಯ್ದುಕೊಳ್ಳುವುದು ಅನಿವಾರ್ಯ ಎನಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts