More

    ಮೈತ್ರಿಕೂಟಕ್ಕೆ ಶಾಕ್! ಪಂಜಾಬ್‌ನ ಎಲ್ಲಾ ಲೋಕಸಭಾ ಸ್ಥಾನಗಳಲ್ಲಿ ಆಪ್ ಏಕಾಂಗಿ ಸ್ಪರ್ಧೆ

    ನವದೆಹಲಿ: ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರವಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಿಹಾರ ಸಿಎಂ ನಿತೀಶ್ ಕುಮಾರ್ ಇಬ್ಬರೂ ಮೈತ್ರಿಕೂಟದಿಂದ ಹೊರಬಂದಿದ್ದು, ಇಂಡಿಯಾ ಮೈತ್ರಿ ಕೂಟಕ್ಕೆ ಬಣಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಪಂಜಾಬ್‌ನ ಎಲ್ಲಾ 13 ಲೋಕಸಭಾ ಸ್ಥಾನಗಳಿಗೆ ತಮ್ಮ ಪಕ್ಷವು ಅಭ್ಯರ್ಥಿಗಳನ್ನು ಘೋಷಿಸಲಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ. 

    ಇದನ್ನೂ ಓದಿ:ಯೋಗಿ ಆದಿತ್ಯನಾಥ್​ ಪಶ್ಚಿಮ ಬಂಗಾಳಕ್ಕೆ ಬಂದರೆ….? ಮುಸ್ಲಿಂ ಮುಖಂಡನ ಹೇಳಿಕೆ ವೈರಲ್

    ಅಂದರೆ ರಾಜ್ಯದಲ್ಲಿ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಇಲ್ಲ ಎಂಬುದನ್ನು ಇದು ಸೂಚಿಸುತ್ತದೆ. ಎಎಪಿ ರಾಜ್ಯದ ಎಲ್ಲಾ 13 ಮತ್ತು ಚಂಡೀಗಢದ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶನಿವಾರ (ಫೆ.10) ಘೋಷಿಸಿದ್ದಾರೆ.

    ದೆಹಲಿ ಮುಖ್ಯಮಂತ್ರಿಯ ಹೇಳಿಕೆಯು ವಿರೋಧ ಪಕ್ಷದ ಗುಂಪಿನಲ್ಲಿ ಗೊಂದಲವನ್ನು ಹೆಚ್ಚಿಸಲಿದೆ. ಈಗಾಗಲೇ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಪಕ್ಷವು ಪಶ್ಚಿಮ ಬಂಗಾಳದಲ್ಲಿ ತನ್ನ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದಾರೆ. ಇತ್ತ ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಕಳೆದ ತಿಂಗಳು ಬಿಜೆಪಿ ನೇತೃತ್ವದ ಎನ್‌ಡಿಎಗೆ ಬದಲಾದರು.

    ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ಒಪ್ಪಂದದ ಲಕ್ಷಣಗಳು ಕಂಡುಬಂದಿರುವ ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ಅಸ್ಪಷ್ಟವಾಗಿದೆ. ಈ ಹೊತ್ತಲ್ಲೇ ಇಂಡಿಯಾ ಬಣದಲ್ಲಿದ್ದ ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳವು ಎನ್‌ಡಿಎ ಜೊತೆ ಕೈಜೋಡಿಸುವ ಸಾಧ್ಯತೆ ದಟ್ಟವಾಗಿದೆ. ಜಯಂತ್ ಚೌಧರಿ ಅವರ ತಾತ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಲಾಗುವುದು ಎಂದು ಸರ್ಕಾರ ಘೋಷಿಸಿದಾಗಿನಿಂದಾಗಿನಿಂದ ಚೌಧರಿ, ಎನ್​​ಡಿಎ ಕಡೆ ವಾಲುವ ಎಲ್ಲ ಲಕ್ಷಣಗಳು ಕಾಣುತ್ತಿವೆ.

    ಪಂಜಾಬ್‌ನಲ್ಲಿ ಮನೆ ಬಾಗಿಲಿಗೆ ಪಡಿತರ ವಿತರಣೆ ಕುರಿತು ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ದೆಹಲಿ ಸಿಎಂ ಕೇಜ್ರಿವಾಲ್, ಲೋಕಸಭಾ ಚುನಾವಣೆ ಎರಡು ತಿಂಗಳಲ್ಲಿ ನಡೆಯಲಿದೆ. ಪಂಜಾಬ್‌ನಲ್ಲಿ 13 ಮತ್ತು ಚಂಡೀಗಢದಲ್ಲಿ ಒಂದು ಸ್ಥಾನವಿದೆ. ಮುಂದಿನ 10-15 ದಿನಗಳಲ್ಲಿ, ಎಎಪಿ ಎಲ್ಲಾ 14 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸುತ್ತದೆ. ಎರಡು ವರ್ಷಗಳ ಹಿಂದೆ (ಪಂಜಾಬ್ ಅಸೆಂಬ್ಲಿ ಚುನಾವಣೆಯ ಸಮಯದಲ್ಲಿ) ನೀವು ಮಾಡಿದಂತೆ ನಮಗೆ ನಿಮ್ಮ ಆಶೀರ್ವಾದವನ್ನು ನೀಡುವಂತೆ ನಾನು ವಿನಂತಿಸುತ್ತೇನೆ ಮತ್ತು ಎಎಪಿ ಎಲ್ಲಾ 14 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಖಚಿತಪಡಿಸಿಕೊಳ್ಳಿ ಎಂದು ಕರೆ ನೀಡಿದರು.

    ವಿಧಾನಸಭೆ ಚುನಾವಣೆಯಲ್ಲಿ ಎಎಪಿ ರಾಜ್ಯದ 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆದ್ದಿತ್ತು. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಜನವರಿಯಲ್ಲಿ ಆಮ್ ಆದ್ಮಿ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದರು.

     

    ‘ಒಂದು ದೇಶ ಒಂದು ಚುನಾವಣೆ’ ವರದಿ ಮಾರ್ಚ್​​ನಲ್ಲಿ ಬಿಡುಗಡೆ: ಅಮಿತ್ ಶಾ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts