ಸ್ವಾಮೀಜಿ ಕಾರು ಅಪಘಾತ, ಚಾಲಕ ಸ್ಥಳದಲ್ಲೇ ಸಾವು; ಶ್ರೀಗಳು ಆಸ್ಪತ್ರೆಗೆ ದಾಖಲು..

Car
Published on

ಗದಗ: ನರಗುಂದ ಹೊರವಲಯದಲ್ಲಿ ಸ್ವಾಮೀಜಿಯೊಬ್ಬರ ಕಾರು ಅಪಘಾತಕ್ಕೀಡಾಗಿದ್ದು, ಇದರದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವಿಗೀಡಾದರೆ, ಗಾಯಗೊಂಡಿರುವ ಸ್ವಾಮೀಜಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಮಠದಲ್ಲಿನ ಸವದತ್ತಿ ಮೂಡಿ ಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಸಂಚರಿಸುತ್ತಿದ್ದ ಕಾರು, ಗದಗ ಜಿಲ್ಲೆಯ ನರಗುಂದ ಪಟ್ಟಣದ ಹೊರವಲಯದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಚಾಲಕ ವೀರೇಶ ಕುರುಡಗಿ (38) ಸ್ಥಳದ್ಲಲೇ ಸಾವಿಗೀಡಾಗಿದ್ದಾರೆ.

ಈ ಅಪಘಾತದಲ್ಲಿ ಶ್ರೀಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net