ಚಿಕ್ಕೋಡಿಯಲ್ಲಿ ಜಾಗೃತಿ ಜಾಥಾ

ಚಿಕ್ಕೋಡಿ: ಆಸೆ, ಆಮಿಷಗಳಿಗೆ ಒಳಗಾಗದೇ ಪ್ರತಿಯೊಬ್ಬರೂ ತಪ್ಪದೆ ಮತದಾನ ಮಾಡಬೇಕು ಎಂದು ಪಿಡಿಒ ಎನ್.ಪಿ.ಬಿರನಗಡ್ಡಿ ಹೇಳಿದ್ದಾರೆ.

ಮಂಗಳವಾರ ತಾಲೂಕಿನ ಮಾಂಜರಿ ಗ್ರಾಪಂ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸಹಯೋಗದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ನಿಲೇಶಾ ಮೋಹಿತೆ, ಗ್ರಾಪಂ ಕಾರ್ಯದರ್ಶಿ ಆರ್.ಪಿ.ಹಲಗಣಿ, ಗ್ರಾಮ ಲೆಕ್ಕಾಧಿಕಾರಿ ಮನೋಜ ಕಾಂಬಳೆ, ಗ್ರಾಮ ಸೇವಕ ವಿಠ್ಠಲ ಪೂಜಾರಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಇತರರು ಇದ್ದರು.