More

    ಕಾಂಗ್ರೆಸ್​ನಲ್ಲಿ 10 ಮಂದಿ ಸಿಎಂ ರೇಸ್​ನಲ್ಲಿದ್ದಾರೆ, ಆ ಪೈಕಿ ನಾನೂ ಒಬ್ಬ: ಡಾ.ಜಿ.ಪರಮೇಶ್ವರ್

    ಮಧುಗಿರಿ: ಮುಂದಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೂರೂ ಪ್ರಮುಖ ರಾಷ್ಟ್ರೀಯ ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆ ಚುರುಕುಗೊಂಡಿದ್ದು, ಆ ನಿಟ್ಟಿನಲ್ಲಿ ಹಲವಾರು ಮೆರವಣಿಗೆ-ಬೆಳವಣಿಗೆಗಳು ಆಗುತ್ತಿವೆ. ಮುಂದಿನ ಮುಖ್ಯಮಂತ್ರಿ ತಾನಾಗಬೇಕು ಎಂಬ ಕನಸು ಈಗಾಗಲೇ ಹಲವರಲ್ಲಿ ಗರಿಗೆದರಿದೆ.

    ಈ ಮಧ್ಯೆ ಕಾಂಗ್ರೆಸ್​ನಲ್ಲೂ ಭಾರಿ ಬೆಳವಣಿಗೆಗಳು ಆಗುತ್ತಿದ್ದು, ಸಿಎಂ ಹುದ್ದೆಗಾಗಿ ಹಲವು ಆಕಾಂಕ್ಷಿಗಳು ಇದ್ದಾರೆ ಎಂಬ ಸಂಗತಿ ಕೂಡ ಹೊರಬಿದ್ದಿದೆ. ಕಾಂಗ್ರೆಸ್​ನ ಹಿರಿಯ ನಾಯಕ, ಮಾಜಿ ಡಿಸಿಎಂ, ಶಾಸಕ ಡಾ.ಜಿ.ಪರಮೇಶ್ವರ ಇಂದು ತುಮಕೂರಿನ ಮಧುಗಿರಿಯಲ್ಲಿ ಈ ವಿಷಯ ಹಂಚಿಕೊಂಡಿದ್ದಾರೆ.

    ಮಧುಗಿರಿ ತಾಲೂಕಿನ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿ ಹನುಮಂತಪುರ ಗ್ರಾಮದಲ್ಲಿ ಬುಧವಾರ ಡಾ.ಜಿ ಪರಮೇಶ್ವರ್ ಅವರು ತಮ್ಮ ಐದು ವರ್ಷಗಳ “ಸಾಧನೆಗಳ ಹೆಜ್ಜೆ ಗುರುತು” ಪುಸ್ತಕವನ್ನು ಪ್ರತಿ ಮನೆಗೆ ತಲುಪಿಸುವ ಸಂದರ್ಭದಲ್ಲಿ ಮಾತನಾಡಿದರು.

    ನಮ್ಮ ಗುರಿ ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ನಂತರ ಸಿಎಂ ಯಾರಾಗಬೇಕು ಎಂಬುದನ್ನು ಅಂತಿಮವಾಗಿ ಹೈಕಮಾಂಡ್ ತೀರ್ಮಾನಿಸಲಿದೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ ಎಂದು ತಿಳಿಸಿದರು. ಅಲ್ಲದೆ ಈ ಬಾರಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ನಮ್ಮ ಪಕ್ಷದಲ್ಲಿ 10 ಜನ ಸಿಎಂ ರೇಸ್​ನಲ್ಲಿದ್ದಾರೆ, ಅದರಲ್ಲಿ ನಾನೂ ಒಬ್ಬ ಎಂದೂ ಹೇಳಿದರು.

    ಇನ್ನೇನು ನಿಮ್ಮ ಕೆಲಸದ ಅವಧಿ ಮುಗಿಯುತ್ತೆ, ಮನೆಗೆ ಹೊರಡಿ: ಈ ಕಂಪನಿಯಲ್ಲಿ ಉದ್ಯೋಗಿಗಳಿಗೆ ಹೀಗೊಂದು ಎಚ್ಚರಿಕೆ!

    ಕೋವಿಶೀಲ್ಡ್ ಕೊಡಬಾರದಿತ್ತು, ಭಾರತದಲ್ಲಿನ್ನು ವ್ಯಾಕ್ಸಿನ್​ ಅನಗತ್ಯ; ಲಸಿಕೆ ಅಡ್ಡಪರಿಣಾಮಗಳ ಕುರಿತು ದನಿ ಎತ್ತಿದ ಡಾಕ್ಟರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts