More

    ಬಜೆಟ್‌ನಲ್ಲಿ ಹಿರಿಯ ನಾಗರಿಕರಿಗೆ ಅನುದಾನ ಮೀಸಲು

    ಬೆಳಗಾವಿ: ರಾಜ್ಯ ಬಿಜೆಪಿ ಸರ್ಕಾರವು ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಆಸಕ್ತಿ ವಹಿಸಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಂಬರುವ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

    ನಗರದ ಗಾಂಧಿ ಭವನದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಹಿರಿಯ ನಾಗರಿಕರ ಸಂಘದ 5 ನೇ ವಾರ್ಷಿಕೋತ್ಸವ ಹಾಗೂ ರಾಜ್ಯ ಮಟ್ಟದ ಪ್ರಥಮ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ರೀತಿಯ ನೆರವು ಮತ್ತು ಸವಲತ್ತು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

    ಅವಿಭಕ್ತ ಕುಟುಂಬದಲ್ಲಿ ಹಿರಿಯರು ನೀಡುವ ಸಂಸ್ಕಾರವೇ ಒಂದು ಪಾಠವಾಗುತ್ತಿತ್ತು. ಆದರೆ ಇಂದು ಸಂಸ್ಕಾರ ಎಂದು ತಿಳಿದುಕೊಳ್ಳುವ ಪರಿಸ್ಥಿತಿ ಬಂದಿರುವುದು ವಿಪರ್ಯಾಸದ ಸಂಗತಿ.ಬದಲಾದ ಜಗತ್ತಿನಲ್ಲಿ ಸಂಬಂಧಗಳು ಹಿರಿಯರ ತೊಂದರೆ,ಸಮಸ್ಯೆಯನ್ನು ಬಗೆ ಹರಿಸಿಕೊಳ್ಳಲು ಸಂಘ ರಚನೆ ಮಾಡಿಕೊಳ್ಳುವ ಮೂಲಕ ಅವರ ಸಮಸ್ಯೆ ಬಗೆ ಹರಿಸಿಕೊಳ್ಳುತ್ತಿದ್ದಾರೆ. ಸರ್ಕಾರ ಮಟ್ಟದಲ್ಲಿ ಮಹಿಳೆ,ಮಕ್ಕಳು ಹಾಗೂ ಹಿರಿಯ ನಾಗರಿಕರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನ್ಯಾಯ ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

    ಸರ್ಕಾರಿ ಆಸ್ಪತ್ರೆಯಲ್ಲಿ ಹಿರಿಯ ನಾಗರಿಕರಿಗೆ ವಿಶೇಷ ಚಿಕಿತ್ಸೆ ಕೊಡಿಸುವ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಜತೆ ಚರ್ಚೆ ಮಾಡಿ ನಿಮ್ಮ ಸಮಸ್ಯೆ ಬಗೆಹರಿಸಿಕೊಡುವ ಜವಾಬ್ದಾರಿ ನನ್ನದು. ಹಿರಿಯ ನಾಗರಿಕರಿಗಾಗಿ ಬಜೆಟನಲ್ಲಿ ಅನುದಾನ ಕಾಯ್ದಿರಿಸಲು ಪ್ರಯತ್ನ ಮಾಡಲಾಗುವುದು.ಈಗಾಗಲೇ ಹಿರಿಯರ ನಾಗರಿಕರ ಪ್ರಕರಣಗಳ ಬಗ್ಗೆ ಸಂಘದ ಪದಾಧಿಕಾರಿಗಳು ಗಮನಕ್ಕೆ ತಂದಿದ್ದು, ಅವುಗಳನ್ನು ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

    ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಮಾತನಾಡಿ, ಹಿರಿಯರ ಅನುಭವ ಯಾವ ಗ್ರಂಥಾಲಯದಲ್ಲಿ ಸಿಗುವುದಿಲ್ಲ.ಮನೆ ಹಾಗೂ ಸಮಾಜಕ್ಕೆ ಹಿರಿಯರ ಕೊಡುಗೆ ಅಪಾರವಾಗಿದೆ. ರಾಜಕಾರಣಿಗಳು ಹಿರಿಯರ ಸೇವೆ ಮಾಡಲು ಇದ್ದೇವೆ. ನಮಗೆ ಪ್ರೇರಣೆ ಹಿರಿಯರೆ ಆಗಿದ್ದಾರೆ.ಮಾ.5ಕ್ಕೆ ಮುಖ್ಯಮಂತ್ರಿಗಳು ಬಜೆಟ್ ಮಂಡಣೆ ಮಾಡಲಿದ್ದಾರೆ. ಸಮಾಜ ಯಾವ ರೀತಿಯಲ್ಲಿರಬೇಕು. ಹಿರಿಯರ ಅನುಭವದಿಂದ ಬಜೆಟ್ ಮಂಡಣೆ ಮಾಡಲಿರುವ ಮುಖ್ಯಮಂತ್ರಿಗಳಿಗೆ ಸೂಕ್ತ ಸಲಹೆ ನೀಡುವಂತೆ ವಿನಂತಿಸಿಕೊಂಡರು.

    ಕಾರಂಜಿಮಠದ ಗುರುಸಿದ್ದ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ಹಿರಿಯ ನಾಗರಿಕರು ಎಂದು ಯಾರು ನಿರ್ಲಕ್ಷೃ ಮಾಡಬಾರದು. ಅವರು ಕಟ್ಟಿ ಬೆಳಸಿದ ಸಮಾಜದಲ್ಲಿ ಅವರಿಗೆಲ್ಲಾ ಗೌರುವ ಸಿಗುವಂತ ವ್ಯವಸ್ಥೆಯನ್ನು ಸರ್ಕಾರಗಳು ಮಾಡಬೇಕು. ಜಾಗತಿಕರಣ ಯುಗದಲ್ಲಿ ಯುವ ಸಮುದಾಯಕ್ಕೆ ಸರಿಯಾದ ಮಾರ್ಗದರ್ಶ ಸಿಗದೆ ದಾರಿ ತಪ್ಪುತ್ತಿದ್ದಾರೆ. ಅವರನ್ನು ಸರಿ ದಾರಿಯಲ್ಲಿ ನಡೆಸಲು ಹಿರಿಯ ನಾಗಕರಿಕರು ಅವಶ್ಯಕವಾಗಿದ್ದಾರೆ ಎಂದರು.

    ರುದ್ರಾಕ್ಷಿಮಠಸಡಾ. ಅಲ್ಲಮಪ್ರಭು ಸ್ವಾಮೀಜಿ ಆರ್ಶಿವಚನ ನೀಡಿದರು. ಮಾಜಿ ಸಚಿವ ಎ.,ಬಿ.ಪಾಟೀಲ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಡಾ.ಗುರುದೇವಿ ಹುಲ್ಲೆಪ್ಪನವಮಠ ಅತಿಥಿಗಳನ್ನು ಸ್ವಾಗತಿಸಿದರು. ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಎ.ವಾಯ್. ಬೆಂಡಿಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.

    ಸರ್ಕಾರಿ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ ಪಾಟೀಲ, ಹಿರಿಯ ನಾಗರಿಕರ ಸಂಘದ ಕಾರ್ಯದರ್ಶಿ ಪ್ರಸಾದ ಹಿರೇಮಠ, ಸಂಸ್ಥಾಪಕ ಅಧ್ಯಕ್ಷ ಪ್ರಭಾಕರ ಕುಲಕರ್ಣಿ ,ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಗೋಮಾಡಿ,ಅಶೋಕ ಮಳಗಲಿ, ಶ್ರೀಕಾಂತ ಶಾನವಾಡ, ಡಾ.ಬಸಲಿಂಗಯ್ಯ ಹಿರೇಮಠ ಸೇರಿದಂತೆ ಇನ್ನಿತರರು ಇದ್ದರು.

    2020-21ನೆ ಸಾಲಿನ ಬಜೆಟ್‌ನಲ್ಲಿ ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಹೆಚ್ಚಿನ ಮೀಸಲಿಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಜತೆಗೆ ಹಿರಿಯ ನಾಗರಿಕರ ಬೇಡಿಕೆಗಳನ್ನು ಈಡೇರಿಸಲು ಕ್ರಮ ವಹಿಸಲಾಗುವುದು.
    |ಶಿಕಲಾ ಜೊಲ್ಲೆ, ವಿಕಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts