More

    ಕನ್ನಡದಲ್ಲಿ ಮಾಹಿತಿ ನೀಡದ್ದಕ್ಕೆ ‘ಅತೀ’ಕ್ ಕೋಪ

    ಬೆಳಗಾವಿ: ಕನ್ನಡದಲ್ಲಿ ಮಾಹಿತಿ ನೀಡದ ಇಂಡಿಗೊ ಏರ್‌ಲೈನ್ಸ್ ವಿರುದ್ಧ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ವಿಮಾನದ ಮೂಲಕ ಬುಧವಾರ ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ‘ಕರ್ನಾಟಕದಲ್ಲಿ ಇಂಡಿಗೊ ಹಾಗೂ ಇತರ ಕಂಪನಿಗಳಿಗೆ ಕನ್ನಡದಲ್ಲಿ ಸೇವೆ ನೀಡಲು ಇರುವ ಸಮಸ್ಯೆಯಾದರೂ ಏನು?’ ಎಂದು ಟ್ವೀಟ್ ಮಾಡಿ ಕೇಳಿದ್ದಾರೆ. ಅವರ ಟ್ವೀಟ್‌ಗೆ ನೆಟ್ಟಿಗರು ಬೆಂಬಲ ವ್ಯಕ್ತಪಡಿಸಿದ್ದು, ಕನ್ನಡ ನೆಲದಲ್ಲೇ ಕನ್ನಡ ಬಳಸದಿರುವುದಕ್ಕೆ ವಿಮಾನಯಾನ ಕಂಪನಿಗಳ ವಿರುದ್ಧ ಆಕ್ರೋಶ ಪ್ರಕಟಿಸಿದ್ದಾರೆ. ‘ವಿದೇಶಿ ವಿಮಾನಯಾನ ಸಂಸ್ಥೆಗಳಾದ ಬ್ರಿಟಿಷ್ ಏರ್‌ವೇಸ್ ಎಮಿರೇಟ್ಸ್, ಸಿಂಗಾಪುರ ಏರ್‌ಲೈನ್ಸ್‌ಕನ್ನಡದಲ್ಲಿ ಸೇವೆ ನೀಡುತ್ತವೆ. ಇಂಡಿಗೊ ಕ್ಯಾಬಿನ್ ಸಿಬ್ಬಂದಿ ಇಂಗ್ಲಿಷ್, ಹಿಂದಿ ಹಾಗೂ ಮಲಯಾಳಂ ಬಳಸುವುದಾದರೆ, ಕನ್ನಡದಲ್ಲಿ ಸೇವೆ ನೀಡದಿರುವುದು ಅಚ್ಚರಿ ಮೂಡಿಸುತ್ತದೆ’ ಎಂದು ಅತೀಕ್ ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ. ‘ನೀವೇ ಸರ್ಕಾರಿ ಅಧಿಕಾರಿ ಇದ್ದೀರಿ. ಇಂತಹ ನಿರ್ಲಕ್ಷೃವಹಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮಟ್ಟದಲ್ಲಿ ಮಾಡಬಾರದೇಕೆ?’ ಎಂದು ಕೆಲವರು ಅಧಿಕಾರಿಗೆ ಸಲಹೆಯನ್ನೂ ನೀಡಿದ್ದಾರೆ. ಪ್ರತಿಕ್ರಿಯಿಸಿರುವ ವಿಮಾನ ಕಂಪನಿಯು, ‘ವಿಷಯವನ್ನು ಸಂಬಂಧಿಸಿದವರ ಗಮನಕ್ಕೆ ತರಲಾಗುವುದು’ ಎಂದು ಟ್ವೀಟ್ ಮಾಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts