More

    ರಟ್ಟಿಹಳ್ಳಿಯಲ್ಲಿ ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್​ನಿಂದ ಸಮಸ್ಯೆ

    ರಟ್ಟಿಹಳ್ಳಿ: ಪಟ್ಟಣದ ಮುಖ್ಯ ರಸ್ತೆಯ ಅಕ್ಕ-ಪಕ್ಕದಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು, ವಾಹನ ಸವಾರರು, ಪಾದಚಾರಿಗಳು ಪರದಾಡುವಂತಾಗಿದೆ. ಪೊಲೀಸ್ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳು ವಾಹನ ನಿಲುಗಡೆಗೆ ಪ್ರತ್ಯೇಕ ಸ್ಥಳ ಗುರುತಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಿದೆ.

    ಪಟ್ಟಣದ ಹೊಸಬಸ್ ನಿಲ್ದಾಣ ವೃತ್ತದಿಂದ ಹಳೇ ಬಸ್ ನಿಲ್ದಾಣದವರೆಗೆ ಮುಖ್ಯ ರಸ್ತೆ ಇದೆ. ಈ ರಸ್ತೆ ಮೂಲಕವೇ ಪಟ್ಟಣಕ್ಕೆ ಪ್ರವೇಶ ಮಾಡಬೇಕಿದ್ದು, ಎರಡೂ ಬದಿಯಲ್ಲಿ ಅಂಗಡಿಗಳಿವೆ. ತಾಲೂಕು ಕೇಂದ್ರವಾದ ಪಟ್ಟಣಕ್ಕೆ ಸುತ್ತಲಿನ ವಿವಿಧ ಗ್ರಾಮಸ್ಥರು ವ್ಯಾಪಾರ- ವಹಿವಾಟಿಗೆ ನಿತ್ಯ ಆಗಮಿಸತ್ತಾರೆ. ಹೊಸ ಬಸ್ ನಿಲ್ದಾಣದ ವೃತ್ತದ ಬಳಿ ಎಸ್​ಬಿಐ, ಕರ್ಣಾಟಕ ಬ್ಯಾಂಕ್, ಇತರೆ ಖಾಸಗಿ ಫೈನಾನ್ಸ್ ಸಂಸ್ಥೆಗಳಿವೆ. ಸರಿಯಾದ ರ್ಪಾಂಗ್ ವ್ಯವಸ್ಥೆ ಇಲ್ಲದ್ದರಿಂದ ಇಲ್ಲಿಗೆ ಬರುವ ಗ್ರಾಹಕರು ರಸ್ತೆ ಬದಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಾರೆ. ಇದರಿಂದ ಟ್ರಾಫಿಕ್ ಕಿರಿಕಿರಿಯಾಗುತ್ತಿದೆ. ಪಟ್ಟಣದ ತುಮ್ಮಿನಕಟ್ಟೆ ರಸ್ತೆ, ಕೋಟೆ ಓಣಿ, ಕಾರಂಜಿ ಸರ್ಕಲ್ ರಸ್ತೆ, ಮಾಸೂರು ರಸ್ತೆಗಳಲ್ಲೂ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡಲಾಗುತ್ತಿದ್ದು, ಅಲ್ಲಿಯೂ ಪದೇಪದೆ ಟ್ರಾಫಿಕ್ ಜಾಮ್ ಆಗುತ್ತಿದೆ.

    ಬೇಕು ವ್ಯಾಪಾರಸ್ಥರ ಸಹಕಾರ:

    ಪಟ್ಟಣದ ಮುಖ್ಯ ರಸ್ತೆಯ ಅಕ್ಕಪಕ್ಕದಲ್ಲಿ ತರಕಾರಿ, ಸೊಪ್ಪು, ಹಣ್ಣು, ಮತ್ತಿತರ ವಸ್ತುಗಳನ್ನು ಮಾರಾಟ ಮಾಡಲಾಗುತ್ತದೆ. ಇವರು ರಸ್ತೆ ಬಿಟ್ಟು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಿದೆ. ಹೆಚ್ಚಿನವರು ರಸ್ತೆ ಮೇಲೆಯೇ ವ್ಯಾಪ್ಯಾರ ಮಾಡುವುದರಿಂದ ಸಮಸ್ಯೆಯಾಗುತ್ತಿದೆ.

    ಈ ಮೊದಲು ರಟ್ಟಿಹಳ್ಳಿ ಗ್ರಾಪಂ ಆಗಿದ್ದಾಗ ಪೊಲೀಸ್ ಇಲಾಖೆಯ ಸಹಕಾರದಲ್ಲಿ ಗ್ರಾಪಂ ವತಿಯಿಂದ 35 ಸಾವಿರ ರೂ. ವೆಚ್ಚದಲ್ಲಿ ರಸ್ತೆ ಬದಿ ವಾಹನಗಳ ನಿಲುಗಡೆಗೆ ಸ್ಥಳ ನಿಗದಿ ಮಾಡಿ ನಾಮಫಲಕ ಅಳವಡಿಸಲಾಗಿತ್ತು. ಅದು ಕೂಡ ಸಂಪೂರ್ಣ ಯಶಸ್ವಿಯಾಗಲಿಲ್ಲ. ಈಗ ರಸ್ತೆಯುದ್ದಕ್ಕೂ ವಾಹನ ನಿಲುಗಡೆ ಮಾಡದಂತೆ ನೋಡಿಕೊಳ್ಳಬೇಕು. ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ವಾಹನ ನಿಲುಗಡೆ ನಿಷೇಧದ ಬಗ್ಗೆ ಜಾಗೃತಿ ಮೂಡಿಸಬೇಕು. ಪಪಂ ಕೂಡ ಬಗ್ಗೆ ಕೈಜೋಡಿಸಬೇಕು.

    | ರವೀಂದ್ರ ಮುದಿಯಪ್ಪನವರ, ಗ್ರಾಪಂ ಮಾಜಿ ಅಧ್ಯಕ್ಷ ರಟ್ಟಿಹಳ್ಳಿ

    ಪ್ರತಿದಿನ ಪಟ್ಟಣದ ಮುಖ್ಯ ರಸ್ತೆಯ ಅಕ್ಕಪಕ್ಕ ವಾಹನಗಳ ನಿಲುಗಡೆಯಿಂದ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಸಹ ಸವಾರರಿಗೆ ತಿಳಿವಳಿಕೆ ನೀಡುತ್ತಿದ್ದಾರೆ. ಅಲ್ಲಿ ಶೀಘ್ರ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಸೂಕ್ತ ರ್ಪಾಂಗ್ ವ್ಯವಸ್ಥೆಗೆ ಯೋಜನೆ ರೂಪಿಸಲಾಗುವುದು.

    | ಜಗದೀಶ ಜಿ.ಪಿ., ಎಸ್​ಐ ರಟ್ಟಿಹಳ್ಳಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts