

ಚಿತ್ರದುರ್ಗ: ಬೆಳ್ಳಂಬೆಳಗ್ಗೆ ಎರಡು ಬಸ್, ಒಂದು ಕಾರು ಹಾಗೂ ಒಂದು ಕ್ಯಾಂಟರ್ ಸರಣಿ ಅಪಘಾತಕ್ಕೆ ಒಳಗಾಗಿದ್ದು, ಇಬ್ಬರು ಮೃತ ಪಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೇಹಳ್ಳಿ ಬಳಿ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಪಟ್ರೇಹಳ್ಳಿ ಸಮೀಪ ಬೆಳಗ್ಗೆ ನಾಲ್ಕು ಗಂಟೆಗೆ ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಖಾಸಗಿ ಬಸ್, ಮಾರುತಿ ಆಮ್ನಿ, ಟಾಟಾ ಇಂಡಿಕಾ, ಟಾಟಾ ಏಸ್, ಕ್ಯಾಂಟರ್ ಸೇರಿ ಐದು ವಾಹನಗಳು ಅಪಘಾತಕ್ಕೆ ಒಳಗಾಗಿದ್ದು, ಆಮ್ನಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಾವೇರಿ ಮೂಲದ ಲತಾ (28), ಅತ್ತಿಬೆಲೆ ಮೂಲದ ಶಶಿಕುಮಾರ್ (26) ಮೃತರು. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿದಿದೆ.