More

    ಶಿವಮೊಗ್ಗ ಕಾಂಗ್ರೆಸ್‌ನಲ್ಲಿ ನಿಗಮ-ಮಂಡಳಿಗೆ ಹಕ್ಕೊತ್ತಾಯ

    ಶಿವಮೊಗ್ಗ: ನಿಗಮ-ಮಂಡಳಿಗಳ ಪೈಕಿ ಒಂದರಲ್ಲಾದರೂ ಮುಸ್ಲಿಂ ಸಮುದಾಯದವರಿಗೆ ಅಧ್ಯಕ್ಷ ಸ್ಥಾನ ನೀಡದೇ ಇದ್ದರೆ ಮುಂದಿನ ಚುನಾವಣೆಯಲ್ಲಿ ವ್ಯತಿರಿಕ್ತ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮುಸ್ಲಿಂ ಮುಖಂಡರು ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

    ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಚ್.ಸಿ.ಯೋಗೀಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್ ಮುಂತಾದವರು ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಬೆಂಬಲಿಸಿದರೆ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ನಿಮ್ಮ ಸಮುದಾಯದವರಿಗೆ ನೀಡುವುದಾಗಿ ನಮ್ಮ ನಾಯಕರೆದರು ವಾಗ್ದಾನ ಮಾಡಿದ್ದರು ಎಂದು ಕಾಂಗ್ರೆಸ್ ಜಿಲ್ಲಾ ಮುಖಂಡ ಆಸೀಫ್ ಮಸೂದ್ ಹೇಳಿದ್ದಾರೆ.
    ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಈಗಾಗಲೇ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಆ ಪ್ರಕಾರ ಜಿಲ್ಲೆಯ ಐದು ಜನರಿಗೆ ಅಧ್ಯಕ್ಷ ಸ್ಥಾನ ಸಿಗಲಿದೆ. ಆದರೆ ಈ ಪಟ್ಟಿಯಲ್ಲಿ ಮುಸ್ಲಿಂ ಸಮುದಾಯದವರ ಹೆಸರೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಸಮುದಾಯದ ಶೇ.98 ಮತಗಳು ಕಾಂಗ್ರೆಸ್ ಅಭ್ಯರ್ಥಿಗೆ ಹೋಗಿವೆ. ನಮ್ಮ ಸಮಾಜದ ಮುಖಂಡರು ಚುನಾವಣೆಯಲ್ಲಿ ಶ್ರಮವಹಿಸಿ ಪಕ್ಷಕ್ಕಾಗಿ ಕೆಲಸ ಮಾಡಿದ್ದಾರೆ. ಈಗ ಪಕ್ಷದ ನಾಯಕರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ಇದು ನಮ್ಮ ಹಕ್ಕೊತ್ತಾಯ. ಇದಕ್ಕೆ ಸ್ಪಂದನೆ ಸಿಗದೇ ಇದ್ದರೆ ಬೇರೆಯದೇ ಪರಿಣಾಮ ಎದುರಿಸಬೇಕಾಗುತ್ತದೆ ಎಂದರು.
    ಮುಸ್ಲಿಂ ಸಮಾಜದ ಪ್ರಮುಖರಾದ ಅಲ್ತ್ಾ ರ್ವೇಜ್, ಅಕ್ಬರ್, ನಯಾಜ್ ಅಹಮದ್, ಜಾವಿದ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts