More

    ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 153ಕ್ಕೆ ಏರಿಕೆ

    ಬೆಳಗಾವಿ: ಮಹಾರಾಷ್ಟ್ರ ಮತ್ತು ದೆಹಲಿಯಿಂದ ಜಿಲ್ಲೆಗೆ ಆಗಮಿಸಿದ್ದ ಇಬ್ಬರು ಮಹಿಳೆ ಮತ್ತು 11 ಪುರುಷರು ಸೇರಿ ಒಟ್ಟು 13 ಜನರಲ್ಲಿ ಭಾನುವಾರ ಕರೊನಾ ವೈರಸ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 153ಕ್ಕೆ ಏರಿಕೆಯಾಗಿದೆ.

    ಕೇಂದ್ರ ಸರ್ಕಾರವು ಲಾಕ್‌ಡೌನ್ ಸಡಿಲಗೊಳಿಸದ ಬಳಿಕ ರಸ್ತೆ ಸಾರಿಗೆ ಮತ್ತು ರೈಲ್ವೆ ಮೂಲಕ ಮೇ 20ರಂದು 250 ಕ್ಕೂ ಅಧಿಕ ಜನರು ಕುಂದಾನಗರಿಗೆ ಆಗಮಿಸಿದ್ದರು. ಅವರೆಲ್ಲರನ್ನೂ ಚಿಕ್ಕೋಡಿ, ಹುಕ್ಕೇರಿ ಹಾಗೂ ಬೆಳಗಾವಿ ತಾಲೂಕಿನ ವಿವಿಧ ಸರ್ಕಾರಿ ವಸತಿ ನಿಲಯಗಳಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

    ಎಲ್ಲರ ಗಂಟಲು ದ್ರವ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಅವರಲ್ಲಿ ಮಹಾರಾಷ್ಟ್ರದಿಂದ ಆಗಮಿಸಿದ್ದ 12 ಮತ್ತು ದೆಹಲಿಯಿಂದ ಆಗಮಿಸಿದ್ದ ಒಬ್ಬರಲ್ಲಿ ಸೋಂಕು ದೃಢಪಟ್ಟಿದ್ದಾಗಿ ಭಾನುವಾರ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್‌ನಿಂದ ತಿಳಿದುಬಂದಿದೆ.

    ಚಿಕ್ಕೋಡಿ ತಾಲೂಕಿನ ಹಿರೇಕೂಡಿ, ನಂದವಾಡಿ ಗ್ರಾಮದ-5, ಬೆಳಗಾವಿ ತಾಲೂಕಿನ ಅಗಸಗಾ ಮತ್ತು ಮುತ್ಯಾನಟ್ಟಿ ಗ್ರಾಮದ-5 ಹಾಗೂ ಹುಕ್ಕೇರಿ ಪಟ್ಟಣದ-3 ಜನ ಸೇರಿ ಒಟ್ಟು 13 ಜನರಲ್ಲಿ ಕರೊನಾ ವೈರಸ್ ದೃಢಪಟ್ಟಿದೆ. ಇವರೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ
    ಹೊಂದಿರುವವರ ಪತ್ತೆಗೆ ಸರ್ವೇ ಕಾರ್ಯ ಆರಂಭಿಸಲಾಗಿದೆ. ಸೋಂಕಿತರೆಲ್ಲರನ್ನೂ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಆರೋಗ್ಯ
    ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಈಗಾಗಲೇ ಮಹಾರಾಷ್ಟ್ರದ ಪುಣೆ, ಮುಂಬೈ, ಸೊಲ್ಲಾಪುರ, ಕೊಲ್ಲಾಪುರ, ನಾಗಪುರ ಸೇರಿ ವಿವಿಧ ಭಾಗಗಳಿಂದ ಜಿಲ್ಲೆಗೆ ಆಗಮಿಸಿದ 5 ಸಾವಿರಕ್ಕೂ ಅಧಿಕ ಜನರನ್ನು ಜಿಲ್ಲಾಡಳಿತ ಆಯಾ ಗ್ರಾಮಗಳಲ್ಲಿರುವ ವಿವಿಧ ಸರ್ಕಾರಿ ವಸತಿ ನಿಲಯಗಳಲ್ಲಿ ಕ್ವಾರಂಟೈನ್ ಮಾಡಿದೆ. ಅದರಲ್ಲಿ ಸಾವಿರಕ್ಕೂ ಅಧಿಕ ಜನರನ್ನು ವರದಿ ಬರುವ ಮುನ್ನವೇ ಬಿಡುಗಡೆ ಮಾಡಿದ್ದು, ಆ ಪೈಕಿ 8 ಜನರಲ್ಲಿ ಕರೊನಾ ವೈರಸ್ ದೃಢಪಟ್ಟಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts