More

    ಬೆಳಗಾವಿಯಲ್ಲಿ ಹೆಚ್ಚುತ್ತಿರುವ ಗಾಂಜಾ ನಶೆ

    ಬೆಳಗಾವಿ: ಬೆಂಗಳೂರಿನ ಡ್ರಗ್ಸ್ ಪ್ರಕರಣ ಭಾರಿ ಸುದ್ದಿಯಲ್ಲಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆಯ ವಿವಿಧೆಡೆ ದಾಳಿ ಮಾಡಿರುವ ಪೊಲೀಸರು ಗಾಂಜಾ ಮಾರುತ್ತಿದ್ದ ಒಟ್ಟು ಏಳು ಜನರನ್ನು ಬಂಧಿಸಿದ್ದಾರೆ. ಅಲ್ಲದೆ, ಬಂಧಿತರಿಂದ ಲಕ್ಷಾಂತರ ರೂ. ಮೌಲ್ಯದ ಒಟ್ಟು 140.210 ಕೆ.ಜಿ.ಗಾಂಜಾ, ವಾಹನ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

    ಬೆಳಗಾವಿ ನಗರದ ಕ್ಯಾಂಪ್ ಠಾಣೆ ಪೊಲೀಸರು ಶನಿವಾರ, 750 ಗ್ರಾಂ ಗಾಂಜಾ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಕ್ಯಾಂಪ್ ಪ್ರದೇಶದ ಉತ್ಕರ್ಷಬಾಬು ಸುನೀಲ ವರ್ಮಾ (20), ಮಾದ್ವಾ ರಸ್ತೆಯ ಮಯೂರು ರಾಹುತ (25) ಬಂಧಿತರು.

    ಕ್ಯಾಂಪ್ ಪ್ರದೇಶ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ನಿತ್ಯ ಗಾಂಜಾ ಮಾರಾಟ ಮತ್ತು ಸೇವನೆ ಹೆಚ್ಚಾಗುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದರು. ಈ ಕುರಿತು ತನಿಖೆ ಕೈಗೊಂಡ ಕ್ಯಾಂಪ್ ಠಾಣೆ ಪೊಲೀಸರು, ಇವರಿಬ್ಬರನ್ನು ಬಂಧಿಸಿದ್ದಾರೆ. ಅಲ್ಲದೆ, ಗಾಂಜಾ ಸಾಗಣೆಗೆ ಬಳಕೆ ಮಾಡುತ್ತಿದ್ದ ವಾಹನ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಬೆಂಗಳೂರಿನಲ್ಲಿ ಡ್ರಗ್ಸ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಎರಡು ದಿನಗಳಿಂದ ನಗರ ಸೇರಿದಂತೆ ಜಿಲ್ಲಯ ವಿವಿಧ ಭಾಗಗಳಲ್ಲಿ ಕಾರ್ಯಾಚರಣೆ ಕೈಗೊಂಡಿರುವ ಪೊಲೀಸರು ಗಾಂಜಾ, ಡ್ರಗ್ಸ್ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.’

    ಶನಿವಾರ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಗಾಂಜಾ ಮಾರಾಟ ಜಾಲವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಇದೆ ಎಂಬುದು ಸಾಕ್ಷಿ ಸಮೇತ ಸಾಬೀತಾಗಿದೆ. ಗಾಂಜಾ ಪ್ರಕರಣ ಪತ್ತೆ ಹಚ್ಚಿರುವ ಕ್ಯಾಂಪ್ ಠಾಣೆ ಇನ್‌ಸ್ಪೆಕ್ಟರ್ ಡಿ.ಸಂತೋಷಕುಮಾರ್, ಎಎಸ್‌ಐ ಎಂ.ಎ. ಪಾಟೀಲ ಹಾಗೂ ಸಿಬ್ಬಂದಿಯನ್ನು ನಗರ ಪೊಲೀಸ್ ಆಯುಕ್ತ ಡಾ. ಕೆ.ತ್ಯಾಗರಾಜನ್ ಅಭಿನಂದಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts