More

  ಶಿಕ್ಷಣ ಜತೆ ಪಠ್ಯೇತರ ಚಟುವಟಿಕೆ ಅಗತ್ಯ : ರೇಷ್ಮಾ ಉದಯ್ ಕುಮಾರ್ ಶೆಟ್ಟಿ

  ಕಾರ್ಕಳ: ವಿದ್ಯಾರ್ಥಿಗಳು ಗುರು ಹಿರಿಯರ ಮೇಲಿನ ಗೌರವ ಕಾಪಾಡಿಕೊಂಡು ಶಿಕ್ಷಣದ ಜತೆ ಪಠ್ಯೇತರ ಚಟುವಟಿಗಳಲ್ಲಿಯೂ ತೊಡಗಿಸಿಕೊಳ್ಳುವುದರಿಂದ ಜೀವನದಲ್ಲಿ ಉನ್ನತ ಸ್ಥಾನ ತಲುಪಲು ಸಾಧ್ಯ ಎಂದು ಜಿಪಂ ಮಾಜಿ ಸದಸ್ಯೆ ರೇಷ್ಮಾ ಉದಯ್ ಕುಮಾರ್ ಶೆಟ್ಟಿ ಹೇಳಿದರು.

  ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ, ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

  ಬೆಳ್ಮಣ್ ಗ್ರಾಪಂ ಅಧ್ಯಕ್ಷೆ ರಾಮೇಶ್ವರಿ ಶೆಟ್ಟಿ ಉದ್ಘಾಟಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸೂರ್ಯಕಾಂತ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ತಜ್ಞ ತುಕಾರಾಮ್ ಶೆಟ್ಟಿ, ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸರ್ವಜ್ಞ ತಂತ್ರಿ, ರಮಾನಾಥ್ ಶೆಣೈ, ಅಭಿವೃದ್ಧಿ ಸಮಿತಿ ಸದಸ್ಯರಾದ ಅಲ್ವಿನ್ ನೇರಿ ಪಿಂಟೋ, ಪ್ರಸಾದ್ ಶೆಟ್ಟಿ, ಮೋಹನ್‌ದಾಸ್ ಶೆಟ್ಟಿ, ನಿಕಟಪೂರ್ವ ಕಾರ್ಯಾಧ್ಯಕ್ಷ ಸತೀಶ್ ಮಾಡ, ಅರ್ಥಶಾಸ್ತ್ರ ಉಪನ್ಯಾಸಕ ವಿಜಯಕುಮಾರ ನಾಯ್ಕ, ಪ್ರೌಢಶಾಲಾ ವಿಭಾಗ ಶಿಕ್ಷಕಿ ಜಯಂತಿ ಶೆಟ್ಟಿ, ತಾಪಂ ಮಾಜಿ ಸದಸ್ಯೆ ಆಶಾ ದೇವೇಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

  ವಿದ್ಯಾರ್ಥಿ ಪೂರ್ವಿ ರಾವ್ ಬಳಗದವರು ಪ್ರಾರ್ಥಿಸಿದರು. ಪ್ರಾಂಶುಪಾಲ ವಸಂತ್ ಆಚಾರ್ ಪ್ರಾಸ್ತಾವಿಕ ಮಾತನಾಡಿದರು. ಭೌತಶಾಸ್ತ್ರ ಉಪನ್ಯಾಸಕ ಮಾಧವ ಎ. ಕಾರ್ಯಕ್ರಮ ನಿರೂಪಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಉಮಾಗೌರಿ ವಂದಿಸಿದರು.

  See also  ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts