

ಬಂಟ್ವಾಳ: ಆರೋಗ್ಯ ಕ್ಷೇತ್ರದಲ್ಲಿ ಸೇವೆ ಮಾಡುವುದು ದೇವರು ಕೊಟ್ಟ ಅವಕಾಶವಾಗಿದ್ದು, ಕರ್ತವ್ಯ ನಿರ್ವಹಣೆಗೆ ಸಂಬಂಧ ಹಾಗೂ ಸಂವಹನ ಅಗತ್ಯ ಎಂದು ಫಾದರ್ ಮುಲ್ಲರ್ ಚಾರಿಟೆಬಲ್ ಇನ್‌ಸ್ಟಿಟ್ಯೂಷನ್ಸ್ ಮಾಜಿ ನಿರ್ದೇಶಕ ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಹೇಳಿದರು.
ತುಂಬೆ ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜು ಹಾಗೂ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ಪ್ಲೋರೆನ್ಸ್ ನೈಂಟಿಗೆಲ್ ಸಭಾಂಗಣದಲ್ಲಿ ಬಿ.ಎಸ್ಸಿ ನರ್ಸಿಂಗ್ 4ನೇ ಬ್ಯಾಚ್, ಬಿ.ಎಸ್ಸಿ ಅನಾಸ್ತೇಶಿಯಾ ಹಾಗೂ ಆಪರೇಷನ್ ಥಿಯೇಟರ್ ಟೆಕ್ನಾಲಜಿ, ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ ಕೋರ್ಸ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಮಂಗಳೂರು ಫಾದರ್ ಮುಲ್ಲರ್ ಚಾರಿಟೆಬಲ್ ಇನ್‌ಸ್ಟಿಟ್ಯೂಷನ್ಸ್ ನಿರ್ದೇಶಕ ಪಾವೋಸ್ತಿನ್ ಲುಕಾಸ್ ಲೋಬೊ ಅಧ್ಯಕ್ಷತೆ ವಹಿಸಿದ್ದರು. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ಕಿರಣ್ ಶೆಟ್ಟಿ, ನರ್ಸಿಂಗ್ ಕಾಲೇಜು ಉಪಪ್ರಾಂಶುಪಾಲೆ ಪ್ರೊ.ಜಾನೆಟ್ ಸಿಕ್ವೇರಾ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಡಾ.ಮೈಕಲ್ ಸಾಂತ್ ಮಯೂರ್ ಉಪಸ್ಥಿತರಿದ್ದರು. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆ ಆಡಳಿತಾಧಿಕಾರಿ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೊ ಸ್ವಾಗತಿಸಿದರು. ತುಂಬೆ ಫಾದರ್ ಮುಲ್ಲರ್ ಅಲೈಡ್ ಹೆಲ್ತ್ ಸೈನ್ಸ್ ಕಾಲೇಜು ಪ್ರಾಂಶುಪಾಲ ಡಾ.ಶಿವಶಂಕರ್ ಎ.ಆರ್. ವಂದಿಸಿದರು. ನಿಶಾ ಸಿಲ್ವಿಯಾ ಲೋಬೊ ಕಾರ್ಯಕ್ರಮ ನಿರ್ವಹಿಸಿದರು.
ದಾದಿಯ ಕರ್ತವ್ಯ ನಿರ್ವಹಣೆಯಲ್ಲಿ ಜ್ಞಾನ, ಕೌಶಲ ಹಾಗೂ ಮೌಲ್ಯ ಎಂಬ ಮೂರು ಅಂಶಗಳ ಕುರಿತು ಅರಿತುಕೊಳ್ಳುವುದು ಅಗತ್ಯವಾಗಿದ್ದು, ನಿರಂತರ ಕೆಲಸ ಮಾಡಿದಾಗ ನಮ್ಮ ಕೌಶಲ ವೃದ್ಧಿಸಿಕೊಳ್ಳುವುದು ಸಾಧ್ಯ. ಪ್ರತಿಯೊಬ್ಬರೂ ಜವಾಬ್ದಾರಿ ಅರಿತು ಸರಿಯಾದ ಸಮಯಕ್ಕೆ ಕರ್ತವ್ಯ ನಿರ್ವಹಿಸುವ ಜತೆಗೆ ಸಹಾನುಭೂತಿ ಮೈಗೂಡಿಸಿಕೊಳ್ಳಬೇಕು. ಅಧ್ಯಯನದಿಂದ ತಪ್ಪಿಸಿಕೊಳ್ಳದೆ ಕರ್ತವ್ಯವನ್ನು ಸೇವಾ ಮನೋಭಾವದಿಂದ ನೋಡಿದಾಗ ಸಮರ್ಥವಾಗಿ ಕೆಲಸ ನಿರ್ವಹಿಸಬಹುದು. ಪಾವೋಸ್ತಿನ್ ಲುಕಾಸ್ ಲೋಬೊ, ಮಂಗಳೂರು ಫಾದರ್ ಮುಲ್ಲರ್ ಚಾರಿಟೆಬಲ್ ಇನ್‌ಸ್ಟಿಟ್ಯೂಷನ್ಸ್ ನಿರ್ದೇಶಕ