ಕುಂದಾಪುರ: ಕ್ರೀಡೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸುವುದು ಮುಖ್ಯ. ಸೋಲೇ ಗೆಲುವಿನ ಸೋಪಾನ ಗೆದ್ದಾಗ ಹಿಗ್ಗದೆ ಸೋತಾಗ ಕುಗ್ಗದೆ ಎರಡನ್ನು ಸಮಾನವಾಗಿ ಸ್ವೀಕರಿಸಬೇಕು ಕುಂದಾಪುರ ರೋಟರಿ ಕ್ಲಬ್ ರಿವರ್‌ಸೈಡ್ ಉಪಾಧ್ಯಕ್ಷ ಸದಾನಂದ ಉಡುಪ ಹೇಳಿದರು.
ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಶುಕ್ರವಾರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಜಂಟಿ ಕಾರ್ಯದರ್ಶಿ ಸುಪ್ರಿಯಾ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಪ್ರೇಮಿಕಾ, ರೋಟರಿ ಕಾರ್ಯದರ್ಶಿ ರೊನಾಲ್ಡ್ ಡಿಮೆಲ್ಲೋ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಗ್ರೇಸಿ ಡಿಸೋಜ, ಶಿಕ್ಷಕರು, ಶಿಕ್ಷಕೇತರರು ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಐ.ವಿ. ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಮೈಕಲ್ ವಂದಿಸಿದರು.