

ಗಂಗೊಳ್ಳಿ: ವ್ಯಕ್ತಿತ್ವ ವಿಕಾಸನಕ್ಕೆ ಹಾಗೂ ನಾಯಕತ್ವ ಗುಣಕ್ಕೆ ಸಂಘಗಳಲ್ಲಿ ವಿದ್ಯಾರ್ಥಿಗಳ ಸಹಭಾಗಿತ್ವ ಪ್ರಮುಖವಾದದ್ದು ಎಂದು ಕಾಲೇಜು ಅರ್ಥಶಾಸ್ತ್ರ ಉಪನ್ಯಾಸಕ ಕುಮಾರ್ ಹೇಳಿದರು.
ಹಾಲಾಡಿ ಹೆಗ್ಗುಂಜೆ ರಾಜೀವ ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಶನಿವಾರ ವಿವಿಧ ಸಂಘಗಳನ್ನು ಉದ್ಘಾಟಿಸಿ ಮಾತನಾಡಿದರು.
ಸಂಸತ್ತಿನ ಮಂತ್ರಿಮಂಡಲಕ್ಕೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಮುಖ್ಯ ಶಿಕ್ಷಕಿ ರೋಶನ್ ಬೀಬಿ ಅಧ್ಯಕ್ಷತೆ ವಹಿಸಿದ್ದರು. ಎಸ್ಡಿಎಂಸಿ ಅಧ್ಯಕ್ಷ ಸತೀಶ ಹೆಗ್ಡೆ ಶುಭ ಹಾರೈಸಿದರು. ಶಿಕ್ಷಕರಾದ ಶ್ರೀಪತಿ ಐತಾಳ್, ರತ್ನಾಕರ್, ಶಿಕ್ಷಕಿಯರಾದ ಶ್ವೇತಾ, ಭಾರತಿ ಉಪಸ್ಥಿತರಿದ್ದರು.
ಶಿಕ್ಷಕಿ ಮಾಲಿನಿ ಸ್ವಾಗತಿಸಿದರು. ಶಿಕ್ಷಕ ಹರಿಶ್ಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸವಿತಾ ಸಾಧಕ ವಿದ್ಯಾರ್ಥಿಗಳ ಬಹುಮಾನ ವಾಚಿಸಿದರು. ಶಿಕ್ಷಕ ನಾಗೇಂದ್ರ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶಾಂತಿ ವಂದಿಸಿದರು.