ಕುತ್ಲೂರು ಶಾಲೆ ರಾಜ್ಯಕ್ಕೆ ಮಾದರಿ : ವಿವಿಧ ಕಾಮಗಾರಿ ಉದ್ಘಾಟಿಸಿ ಕೆ.ವಿ.ಪ್ರಭಾಕರ ಅಭಿಪ್ರಾಯ

New Project (1)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ಮನೋಭಾವ ನನ್ನದು. ಸರ್ಕಾರಿ ಶಾಲೆಯನ್ನು ಕಡೆಗಣಿಸುವುದು ಸರಿಯಲ್ಲ. ಕುತ್ಲೂರು ಶಾಲೆ ರಾಜ್ಯಕ್ಕೆ ಮಾದರಿಯಾಗಲಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಹೇಳಿದರು.

ಕುತ್ಲೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ, ಮಂಜುಶ್ರೀ ಸಭಾಭವನದಲ್ಲಿ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಿ ಮಾತನಾಡಿದರು.

ಎಸ್‌ಡಿಎಂಸಿ ಅಧ್ಯಕ್ಷ ರಾಮಚಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ಕೆಡಿಆರ್‌ಡಿಪಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ವಾರ್ತಾಧಿಕಾರಿ ಖಾದರ್ ಷಾ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಎಂಆರ್‌ಪಿಎಲ್ ಸಿಎಸ್‌ಆರ್ ಪ್ರಬಂಧಕ ಹರೀಶ್, ಕ್ವಾಯರ್ ಬೋರ್ಡ್ ಅಧ್ಯಕ್ಷ ನಟರಾಜ್, ಸೇವಾ ಭಾರತಿ ಅಧ್ಯಕ್ಷ ವಿನಾಯಕ್ ರಾವ್, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ, ಕೋಶಾಧಿಕಾರಿ ಪುಷ್ಪರಾಜ್, ಸದಸ್ಯ ರಾಜೇಶ್, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಹರೀಶ್ ರೈ, ನಾರಾವಿ ಗ್ರಾಪಂ ಅಧ್ಯಕ್ಷ ರಾಜರತ್ನ ಜೈನ್, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಉಮಾಕಾಂತ ಅರಿಗ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ನಿಮಿತ್ ಜೈನ್, ಹಿರಿಯರಾದ ಡಾಕಯ್ಯ ಪೂಜಾರಿ, ಗುತ್ತಿಗೆದಾರ ವಿನಯಕುಮಾರ್, ಉಪಾಧ್ಯಕ್ಷೆ ಶ್ವೇತಾ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಜ್ಯೋತಿ ಸ್ವಾಗತಿಸಿದರು. ಶಿಕ್ಷಕಿ ರೂಪಾ ವಂದಿಸಿದರು. ಶಿಕ್ಷಕ ಅಜಿತ್‌ಕುಮಾರ್ ನಿರೂಪಿಸಿದರು.

ಶಾಲಾ ಕೊಠಡಿ, ಕಂಪ್ಯೂಟರ್ ಉದ್ಘಾಟನೆ

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಶಾಲಾ ಫಲಕ, ಕೊಳವೆ ಬಾವಿ, ಚಿತ್ರಗಳುಳ್ಳ ಶಾಲಾ ಕೊಠಡಿ, ವಿದ್ಯುದೀಕರಣ, ಶೌಚಗೃಹ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಕಂಪ್ಯೂಟರನ್ನು ಕೆ.ವಿ.ಪ್ರಭಾಕರ್ ಉದ್ಘಾಟಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net