ಸಂಘಟನೆಯಿಂದ ಸಾಮಾಜಿಕ ಬಲವರ್ಧನೆ ಸಾಧ್ಯ

mng_13 sept youvavahini
ಯುವವಾಹಿನಿ ಕಂಕನಾಡಿ ಘಟಕದ ಸಹಯೋಗದಲ್ಲಿ ಗರೋಡಿ ಸಮೃದ್ಧಿ ಸಭಾಭವನದಲ್ಲಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತಿಚೆಗೆ ಯುವವಾಹಿನಿ ಕಂಕನಾಡಿ ಘಟಕ ಅಧ್ಯಕ್ಷ ಲೋಕೇಶ್ ಅಮೀನ್ ಅಧ್ಯಕ್ಷತೆ ನಡೆಯಿತು. ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಹರೀಶ್ ಕೆ ಪೂಜಾರಿ ಸಹಿತ ಹಲವರು ಇದ್ದರು.
Published on

ಮಂಗಳೂರು: ಸಂಘಟನೆಯಿಂದ ಸಾಮಾಜಿಕ ಬಲವರ್ಧನೆ ಸಾಧ್ಯವಿದ್ದು, ಸಂಘಟನೆಯೊಂದು ಸಮಾಜಮುಖಿಯಾದ ತನ್ನ ಚಿಂತನೆಗಳಲ್ಲಿ ರಚನಾತ್ಮಕತೆಯನ್ನು ಅಳವಡಿಸಿಕೊಂಡಾಗ ಅದು ಸರ್ವಮಾನ್ಯತೆಯನ್ನು ಪಡೆದುಕೊಳ್ಳುತ್ತದೆ ಎಂದು ಉದ್ಯಮಿ ಲೋಕೇಶ್ ಪೂಜಾರಿ ಹೇಳಿದರು.

ಯುವವಾಹಿನಿ ಕಂಕನಾಡಿ ಘಟಕದ ಸಹಯೋಗದಲ್ಲಿ ಗರೋಡಿ ಸಮೃದ್ಧಿ ಸಭಾಭವನದಲ್ಲಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸಂಘಟನೆಗಳ ಸಮಾಜಮುಖಿ ಕಾರ್ಯಗಳು ಸರ್ವರನ್ನೂ ಒಳಗೊಳ್ಳುವ ಒಲವು ಹೊಂದಿರಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ ಕಂಕನಾಡಿ ಘಟಕವು ಹಮ್ಮಿಕೊಂಡಿರುವ ಸಮಾಜಮುಖಿ ಹತ್ತು ಹಲವು ಕಾರ್ಯಕ್ರಮವು ಸರ್ವಸ್ಪರ್ಶಿ ಉದ್ದೇಶವನ್ನು ಹೊಂದಿದ್ದು, ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿವೆ ಎಂದರು.

ಯುವವಾಹಿನಿ ಕಂಕನಾಡಿ ಘಟಕ ಅಧ್ಯಕ್ಷ ಲೋಕೇಶ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು.

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಹರೀಶ್ ಕೆ ಪೂಜಾರಿ ಪದಪ್ರಧಾನ ನೆರವೇರಿಸಿದರು. ಗೋಕರ್ಣತೇಶ್ವರ ಕಾಲೇಜಿನ ನಿವೃತ್ತ ಡೀನ್ ಡಾ. ಉಮ್ಮಪ್ಪ ಪೂಜಾರಿ.ಪಿ, ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ಸೇವಾ ಸಮಿತಿ ಉಜ್ಜೋಡಿ ಇದರ ಅಧ್ಯಕ್ಷ ಉಮನಾಥ್ ಕೋಟ್ಯಾನ್, ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಸುಂದರ್ ಸುವರ್ಣ ಸೇರಿದಂತೆ ಹಲವರು ಇದ್ದರು.

ಯುವವಾಹಿನಿ ಕಂಕನಾಡಿ ಘಟಕದ ನೂತನ ಅಧ್ಯಕ್ಷರಾಗಿ ರಾಹುಲ್ ಸನಿಲ್ ಹಾಗೂ ಕಾರ್ಯದರ್ಶಿಯಾಗಿ ನವೀನ್ ಕೋಟ್ಯಾನ್ ಅವರು ಆಯ್ಕೆಯಾದರು. ನವೀನ್ ಕೋಟ್ಯಾನ್ ವಂದಿಸಿದರು. ಮೇಘ ಹಾಗೂ ಧನುಷ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net