ಎನ್ನೆಸ್ಸೆಸ್ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

blm (1)
Published on

ಶಿರ್ವ: ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕವು ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಕಾಲೇಜು ಆವರಣದಲ್ಲಿ ಇತ್ತೀಚೆಗೆ ನಡೆಯಿತು.

ಸಮಾಜ ಸೇವಕ ರವಿ ಕಟಪಾಡಿ ಉದ್ಘಾಟಿಸಿ ಮಾತನಾಡಿ, ಸಮುದಾಯ ಸೇವೆಯ ಮಹತ್ವದ ಬಗ್ಗೆ ತಿಳಿಸಿದರು ಮತ್ತು ವಿದ್ಯಾರ್ಥಿಗಳು ಸಾಮಾಜಿಕ ಬದ್ಧತೆ ಮತ್ತು ಸಹಾನುಭೂತಿಯಿಂದ ಸಾಮಾಜಿಕ ಕಾರ್ಯಗಳಿಗೆ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.

ಸೋದೆ ಶಿಕ್ಷಣ ಸಮೂಹ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ರಾಧಾಕೃಷ್ಣ ಎಸ್.ಐತಾಳ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶೈಕ್ಷಣಿಕ ಡೀನ್ ಡಾ.ನಾಗರಾಜ ಭಟ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net