More

    ಕೂಸಿನ ಮನೆಯ ಲಾಭ ಪಡೆಯಿರಿ

    ವಡಗೇರಾ: ನರೇಗಾ ಯೋಜನೆ ನೋಂದಾಯಿತ ಕೂಲಿ ಕಾರ್ಮಿಕರು ಮತ್ತು ಕೃಷಿ ಕೂಲಿ ಕಾರ್ಮಿಕರು ಮಕ್ಕಳ ಆರೈಕೆಯಾಗಿ ಸರ್ಕಾರ ಆರಂಭಿಸಿರುವ ಕೂಸಿನ ಮನೆಯ ಲಾಭ ಪಡೆದುಕೊಳ್ಳಬೇಕು ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಹೇಳಿದರು.

    ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ವಿವಿಧ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡ ಕೂಸಿನ ಮನೆ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಗ್ರಾಮ ಪಂಚಾಯಿತಿಗೊಂದು ಕೂಸಿನ ಮನೆ ಆರಂಭಿಸಿದ್ದು, ಪಂಚಾಯಿತಿ ವ್ಯಾಪ್ತಿಯ ಕೂಲಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

    ಗ್ರಾಮೀಣ ಪ್ರದೇಶದಲ್ಲಿ ಕೂಲಿ ಕೆಲಸ ಮಾಡುವ ಮಹಿಳೆಯರು ಮೂರು ವರ್ಷದೊಳಗಿನ ಮಕ್ಕಳನ್ನು ಕೂಸಿನ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಬಹುದು. ಮಕ್ಕಳ ಪಾಲಕರು ಕೆಲಸ ಮಾಡಿ ಬರುವವರೆಗೆ ಆರೈಕೆ ಮಾಡಲಾಗುತ್ತದೆ. ದುಡಿಯುವ ಮಹಿಳೆಯರು ನೆಮ್ಮದಿಯಿಂದ ಕೆಲಸ ಮಾಡಲು ನೆರವು ನೀಡುವುದರ ಜತೆಗೆ ಮಹಿಳೆಯರ ಮಕ್ಕಳಿಗೆ ಸುರಕ್ಷತೆ, ಪೂರಕ ಪೌಷ್ಟಿಕ ಆಹಾರ ಸೌಲಭ್ಯದ ಒದಗಿಸಲಾಗುವುದು ಎಂದರು.

    ಗ್ರಾಮ ಪಂಚಾಯಹಿತಿ ಅಧ್ಯಕ್ಷ ಅಬ್ದುಲ್ ಮಜೀದ್, ಇಒ ಮಲ್ಲಿಕಾರ್ಜುನ ಸಂಗ್ವಾರ, ಸಿಡಿಪಿಒ ಮೀನಾಕ್ಷಿ ಪಾಟೀಲ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮರೆಪ್ಪ ಬಿಳ್ಹಾರ, ಗ್ರಾಪಂ ಸದಸ್ಯ ಇಸ್ಮಾಯಿಲ್ ಸಾಬ್, ರಂಗಯ್ಯ ಮುಸ್ತಾಜೀರ್, ಶಾಂತಕುಮಾರ ಗುತ್ತೇದಾರ್, ಬಸವರಾಜ ಪಿಲ್ಲಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts