ಪೆರೋಡಿತ್ತಾಯಕಟ್ಟೆ ಶಾಖೆ ಉದ್ಘಾಟನೆ : ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ

branch
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ಉದ್ಘಾಟಿಸಿದರು. ಭದ್ರತಾ ಕೊಠಡಿಯನ್ನು ಮಾರುತಿ ಕಾಂಪ್ಲೆಕ್ಸ್ ಕಟ್ಟಡ ಮಾಲೀಕ ವಿಠಲ ಹೆಗ್ಡೆ ಉದ್ಘಾಟಿಸಿದರು.

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಾಕೇಶ್ ಹೆಗ್ಡೆ, ಉಪಾಧ್ಯಕ್ಷ ಜನಾರ್ದನ, ಬಳಂಜ ಗ್ರಾಪಂ ಅಧ್ಯಕ್ಷೆ ಶೋಭಾ ಕುಲಾಲ್, ಪೆರೋಡಿತ್ತಾಯಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಅರ್ಕಕೀರ್ತಿ ಹೆಗ್ಡೆ, ಶಿರ್ಲಾಲು ಸಿಎ ಬ್ಯಾಂಕ್ ಅಧ್ಯಕ್ಷ ನವಿನ್ ಕೆ.ಸಾಮಾನಿ, ಅಳದಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಬಳಂಜ ಗ್ರಾಪಂ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಪ್ರಗತಿಪರ ಕೃಷಿಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ಸತೀಶ್ ರೈ ಬಾರ್ದಡ್ಕ, ಉದ್ಯಮಿಗಳಾದ ಸಂತೋಷ್ ಹೆಗ್ಡೆ ಕಟ್ಟೆ, ಶೀತಲ್ ಜೈನ್ ಬೆಳ್ತಂಗಡಿ, ಪ್ರಮೋದ್ ಕುಮಾರ್ ಬಿ.ಬಳಂಜ, ಬಳಂಜ ಗ್ರಾಪಂ ಸದಸ್ಯ ಬಾಲಕೃಷ್ಣ ಪೂಜಾರಿ ಯೈಕುರಿ, ಪೆರೋಡಿತ್ತಾಯಕಟ್ಟೆ ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ್ಣ ಶೆಟ್ಟಿ ನೇಸರ, ಮುಖ್ಯಶಿಕ್ಷಕ ಬೆನೆಡಿಕ್ಟ್, ಪ್ರಗತಿಪರ ಕೃಷಿಕ ಜಗದೀಶ್ ರೈ ಹಾನಿಂಜ, ಅಳದಂಗಡಿ ಸಿಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೀರಾ, ನಿರ್ದೇಶಕರಾದ ಗುರುಪ್ರಸಾದ್ ಹೆಗ್ಡೆ, ವಿಶ್ವನಾಥ ಹೊಳ್ಳ, ಕೊರಗಪ್ಪ, ಹೇಮಂತ್, ದೇವಿಪ್ರಸಾದ್ ಶೆಟ್ಟಿ, ದಿನೇಶ್ ಪಿ.ಕೆ., ದೇಜಪ್ಪ ಪೂಜಾರಿ, ಧರ್ಣಪ್ಪ, ಸುಂದರಿ, ಮಮತಾ, ಸಿಎ ಬ್ಯಾಂಕ್ ಸಿಬ್ಬಂದಿ ಸತೀಶ್ ಕೆ, ಭರತ್ ರಾಜ್, ಪ್ರಶಾಂತ್, ಜಗದೀಶ್, ಸಂತೋಷ್, ಮಮತಾ, ಶ್ರೀದೇವಿ, ಯತೀಶ್, ಹರೀಶ್, ಪ್ರವೀಣ್, ದಿನೇಶ್, ಡೀಕಯ್ಯ ಉಪಸ್ಥಿತರಿದ್ದರು.

ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಸ್ವಾಗತಿಸಿದರು. ಯುವ ಸಾಹಿತಿ ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net