ಜೂನ್ 14ರಂದು ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಕಟ್ಟಡ ಉದ್ಘಾಟನೆ

inaugaration
ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಕಟ್ಟಡ ಸುವರ್ಣ ಸೌಧ ಉದ್ಘಾಟನೆಯ ಆಹ್ವಾನ ಪತ್ರಿಕೆಯನ್ನು ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ ಬಿಡುಗಡೆಗೊಳಿಸಿದರು
Published on

ಅಮಾಸೆಬೈಲು: ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಕಟ್ಟಡ ಸುವರ್ಣ ಸೌಧ ಉದ್ಘಾಟನೆ ಜೂನ್ 14ರಂದು ಜರುಗಲಿದ್ದು, ಆಹ್ವಾನ ಪತ್ರಿಕೆಯನ್ನು ಸೋಮವಾರ ಸಂಘದ ಸಭಾಂಗಣದಲ್ಲಿ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ ಬಿಡುಗಡೆಗೊಳಿಸಿದರು.

ನವೀಕೃತ ಕಟ್ಟಡವನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಆಡಳಿತ ಸಭಾ ಕೊಠಡಿಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಪಡಿತರ ವಿಭಾಗವನ್ನು ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪ್‌ಚಂದ್ರ ಶೆಟ್ಟಿ, ನವೀಕೃತ ಸಭಾಭವನವನ್ನು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ನವೋದಯ ಕೊಠಡಿಯನ್ನು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಲಿದ್ದಾರೆ.

ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ.ಮಹೇಶ್ ಹೆಗ್ಡೆ, ಎಸ್.ರಾಜು ಪೂಜಾರಿ ಬೈಂದೂರು, ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್., ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ., ಅಮಾಸೆಬೈಲು ಗ್ರಾಪಂ ಅಧ್ಯಕ್ಷೆ ಮಲ್ಲಿಕಾ ಕುಲಾಲ್ ಭಾಗವಹಿಸಲಿದ್ದಾರೆ ಎಂದು ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ ಹೇಳಿದರು.

ಸಂಘದ ಉಪಾಧ್ಯಕ್ಷ ಶೇಖರ ನಾಯ್ಕ, ನಿರ್ದೇಶಕರಾದ ನಾರಾಯಣ ರಾವ್ ಕೆ., ಎನ್.ಮಂಜಯ್ಯ ಶೆಟ್ಟಿ, ನರಸಿಂಹ ಶೆಟ್ಟಿ, ಸತೀಶ್ ಹೆಗ್ಡೆ, ಗೋಪಾಲ ಪೂಜಾರಿ, ತಿಮ್ಮಪ್ಪ ಪೂಜಾರಿ, ದಿನೇಶ್ ಶೆಟ್ಟಿಗಾರ್, ಸುಜಯ ಹೆಗ್ಡೆ, ರಾಧಿಕಾ, ಅಕ್ಷತ್‌ಕುಮಾರ್, ಬಿ.ಪ್ರವೀಣ್ ಕುಮಾರ್, ರಘುಪತಿ ರಾವ್, ನಾಗರಾಜ ಪೂಜಾರಿ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಕೃಷ್ಣಕುಮಾರ ಭಾಗವತ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net