

ಮೂಲ್ಕಿ: ದುಷ್ಟರ ನಾಶ ಮತ್ತು ಶಿಷ್ಟರ ರಕ್ಷಣೆ ಮಾಡಿದ ತಾಯಿ ದುರ್ಗೆಯನ್ನು ಪೂಜಾ ಪುನಸ್ಕಾರ ಸಹಿತ ಕಲಾರಾಧನೆಯೊಂದಿಗೆ ಪೂಜಿಸುವ ಶರನ್ನವರಾತ್ರಿಯಲ್ಲಿ ಭಾಗವಹಿಸಿ ಮಾನಸಿಕ ನೆಮ್ಮದಿ ಗಳಿಸಲು ಸಾಧ್ಯವಿದೆ ಎಂದು ಶಾಸಕ ಉಮಾನಾಥ ಎ.ಕೋಟ್ಯಾನ್ ಹೇಳಿದರು.
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇವಸ್ಥಾನ ಆನುವಂಶಿಕ ಮೊಕ್ತೇಸರ ಎಂ.ದುಗ್ಗಣ್ಣ ಸಾವಂತ ಅರಸರು, ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಸುಬ್ರಹ್ಮಣ್ಯ ಭಟ್, ಕಾರ್ನಾಡು ಶ್ರೀ ಹರಿಹರ ಕ್ಷೇತ್ರ ಆಡಳಿತ ಮೊಕ್ತೇಸರ ಎಂ.ಎಚ್.ಅರವಿಂದ ಪೂಂಜ, ಮೂಲ್ಕಿ ನಪಂ ಸದಸ್ಯೆ ದಯಾವತಿ ಅರುಣ್ ಅಂಚನ್, ಕ್ಷೇತ್ರ ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಸುನೀಲ್ ಆಳ್ವ ಉಪಸ್ಥಿತರಿದ್ದರು.
ಕಾರ್ಯನಿರ್ವಣಾಧಿಕಾರಿ ಶ್ವೇತಾ ಪಳ್ಳಿ ಸ್ವಾಗತಿಸಿದರು. ಲಕ್ಷ್ಮಿಕಾಂತ್ ರಾವ್ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮಂಗಳೂರು ಉರ್ವ ನಾಟ್ಯಾರಾಧನಾ ಕಲಾಕೇಂದ್ರ ವತಿಯಿಂದ ಭರತನಾಟ್ಯ ಹಾಗೂ ಜಾನಪದ ನೃತ್ಯ ವೈವಿಧ್ಯ ನಡೆಯಿತು.