More

    ಬಸವೇಶ್ವರ ದೇವಾಲಯ ಉದ್ಘಾಟನೆ

    ಕುಶಾಲನಗರ: ಹೆಬ್ಬಾಲೆ ಶ್ರೀ ಬಸವೇಶ್ವರ ದೇವಾಲಯ ಸಮಿತಿಯ ನೇತೃತ್ವದಲ್ಲಿ ಶ್ರೀ ಬಸವೇಶ್ವರ ದೇವಾಲಯ ಜೀರ್ಣೋದ್ಧಾರ ಹಾಗೂ ಸ್ಧಿರ ಬಿಂದು ಪ್ರತಿಷ್ಠಾಪನಾ ಮಹೋತ್ಸವು ಬುಧವಾರ ಶ್ರದ್ಧಾ ಭಕ್ತಿಯಿಂದ ಜರುಗಿತು.

    1.25 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ದೇವಸ್ಥಾನದಲ್ಲಿ ಶ್ರೀ ಬಸವೇಶ್ವರನ ಮರು ಪ್ರತಿಷ್ಠಾಪನೆ, ಕಳಸರೋಹಣ, ದೇವಾಲಯದ ಉದ್ಘಾಟನಾ ಮಹೋತ್ಸವ ಅಂಗವಾಗಿ ಬುಧವಾರ ಸಂಜೆ ಕಾವೇರಿ ನದಿಯಿಂದ 350ಕ್ಕೂ ಹೆಚ್ಚು ಮಹಿಳೆಯರು ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜನ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಕಳಸ ಹೊತ್ತು ತಂದರು. ಗೋಧೂಳಿ ಲಗ್ನದಲ್ಲಿ ಗಂಗಾಪೂಜೆ, ಗೋಪೂಜೆ, ವಿಗ್ರಹ ಪುಣ್ಯಾಪಿಯೊಂದಿಗೆ ವಿವಿಧ ಹೋಮ-ಹವನ ಮತ್ತು ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು.

    ಶ್ರೀ ಶಾಂತ ಮಲ್ಲಿಕಾರ್ಜನ ಸ್ವಾಮೀಜಿ, ತೊರೆನೂರು ವಿರಕ್ತಮಠದ ಶ್ರೀ ಮಲ್ಲೇಶ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಲುಮಠದ ಶ್ರೀ ಮಹಾಂತ ಸ್ವಾಮೀಜಿ, ವಿರಾಜಪೇಟೆ ಶ್ರೀ ಆತ್ಯಾನಂದಪುರಿ ಸ್ವಾಮೀಜಿ, ಅರಾಧನಹಳ್ಳಿ ಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

    ಗುರುವಾರ ಶ್ರೀ ಬಸವೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ನಂತರ ಧಾರ್ಮಿಕ ಸಭೆ ನಡೆಯಲಿದೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ, ಮಾಜಿ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಬಿ.ಎ.ಜೀವಿಜಯ, ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ಶ್ರೀ ಬಸವೇಶ್ವರ ದೇವಾಲಯ ಸಮಿತಿಯ ಅಧ್ಯಕ್ಷ ಎಚ್.ಎನ್.ಬಸವರಾಜ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts