More

    ಬಿಸಿಯೂಟದ ಅಡುಗೆ ಮನೆ ಉದ್ಘಾಟನೆ


    ಚಾಮರಾಜನಗರ: ಸರ್ಕಾರಿ ಶಾಲೆಗಳ ಮಕ್ಕಳಿಗೆ ಸರ್ಕಾರ ಹಲವಾರು ಉಚಿತ ಸವಲತ್ತುಗಳನ್ನು ನೀಡುತ್ತಿದ್ದು, ಪಾಲಕರು ಇವುಗಳ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಹೇಳಿದರು.


    ಗುಂಡ್ಲುಪೇಟೆ ತಾಲೂಕಿನ ಮುಂಟೀಪುರ ಸರ್ಕಾರಿ ಶಾಲೆಯ ಬಿಸಿಯೂಟದ ಅಡುಗೆ ಮನೆಯನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಗೆ ದಾಖಲಾಗುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಮುಂತಾದ ಎಲ್ಲ ಸವಲತ್ತುಗಳನ್ನು ನೀಡುತ್ತಿದ್ದರೂ ಹೆಚ್ಚಿನ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸಲು ಮುಂದಾಗುತ್ತಿದ್ದಾರೆ. ಕಾಡಂಚಿನ ಮುಂಟೀಪುರ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಮಾಡಲು ಮಕ್ಕಳು ಕುಳಿತುಕೊಳ್ಳಲು ಬೆಂಚು ಹಾಗೂ ಡೆಸ್ಕ್ ವ್ಯವಸ್ಥೆ ಮಾಡಿರುವುದು ಇತರರಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಬರಗಿ ಗ್ರಾಮಪಂಚಾಯಿತಿ ಅಧ್ಯಕ್ಷ ಸೂರ್ಯಪ್ರಕಾಶ್, ಸದಸ್ಯ ಪರಮೇಶ್ವರ, ಪಿಡಿಒ ಮಮತಾ, ಶಾಲೆಯ ಮುಖ್ಯಶಿಕ್ಷಕ ಜಯರಾಂ, ದಿನೇಶ್, ಪಿಎಂಸಿ ಅಧ್ಯಕ್ಷ ಬಸವರಾಜಪ್ಪ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ದೇವರಹಳ್ಳಿ ಮಹೇಶ್ ಸೇರಿದಂತೆ ಹಲವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts