More

    ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಜ.31ಕ್ಕೆ

    ಚಿಕ್ಕಮಗಳೂರು: ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜ. 31ರಂದು ಬೆಳಗ್ಗೆ 11.30ಕ್ಕೆ ನಗರದ ಜಿಲ್ಲಾ ಬಿಜೆಪಿ ಕಚೇರಿ ಪಾಂಚಜನ್ಯದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ನಿಯೋಜಿತ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್ ಶೆಟ್ಟಿ ತಿಳಿಸಿದರು.
    ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪದಗ್ರಹಣ ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಎಸ್.ಸಿ ಕಲ್ಮರುಡಪ್ಪ, ವಿಧಾನ ಸಭಾ ಪ್ರತಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವರಾದ ಸಿ.ಟಿ ರವಿ, ಜೀವರಾಜ್, ಮಾಜಿ ಶಾಸಕರಾದ ಬೆಳ್ಳಿಪ್ರಕಾಶ್, ಡಿ.ಎಸ್ ಸುರೇಶ್, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ ಪ್ರಾಣೇಶ್, ಸಂಸದರು ಹಾಗೂ ಕೇಂದ್ರ ಸಚಿವರೂ ಆದ ಶೋಭಾಕರಂದ್ಲಾಜೆ ಮತ್ತು ಪಕ್ಷದ ಎಲ್ಲ ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
    ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜವನ್ನು ಇಳಿಸಿ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಹಿಂದುಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸುತ್ತಿದೆ. ಹೊತ್ತಲ್ಲದ ಹೊತ್ತಿನಲ್ಲಿ ರಾಷ್ಟ್ರಧ್ವಜಾರೋಹಣ ನಡೆಸುವ ಮೂಲಕ ರಾಷ್ಟ್ರಧ್ವಜ ಹಾಗೂ ಸಂವಿಧಾನಕ್ಕೆ ಅಪಚಾರ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts