ಚಂಬ್ರಕಾನದಲ್ಲಿ ಬಸ್ ನಿಲ್ದಾಣ ಲೋಕಾರ್ಪಣೆ

New Project (25)
Published on

ಪೆರ್ಲ: ರಾಷ್ಟ್ರೀಯ ಸೇವಾ ಯೋಜನೆಯ ಶೇಣಿ ಶ್ರೀ ಶಾರದಾಂಬ ಹೈಯರ್ ಸೆಕೆಂಡರಿ ಶಾಲೆಯ ಘಟಕದ ಕಾರ್ಯಕರ್ತರು ಎಣ್ಮಕಜೆ ಗ್ರಾಪಂ ಬೆದ್ರಂಪಳ್ಳ ವಾರ್ಡ್‌ನ ಚಂಬ್ರಕಾನದಲ್ಲಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಶುಕ್ರವಾರ ಲೋಕಾರ್ಪಣೆಗೊಳಿಸಲಾಯಿತು.

ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಉದ್ಘಾಟಿಸಿದರು. ಪಂಚಾಯಿತಿ ಅಧ್ಯಕ್ಷ ಸೋಮಶೇಖರ ಜೆ.ಎಸ್. ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲಾಕ್ ಸದಸ್ಯ ಅನಿಲ್ ಕುಮಾರ್ ಕೆ.ಪಿ, ಪಂಚಾಯಿತಿ ಸದಸ್ಯರಾದ ರಾಧಾಕೃಷ್ಣ ನಾಯಕ್ ಜೆ.ಎಸ್, ರಾಮಚಂದ್ರ ಎಂ, ರಕ್ಷಕ- ಶಿಕ್ಷಕ ಸಂಘದ ಅಧ್ಯಕ್ಷ ವಿಲ್ಸನ್ ಡಿಸೋಜ, ಉಪಾಧ್ಯಕ್ಷ ಉಮ್ಮರ್ ಕಂಗಿನಮೂಲೆ, ಯುಪಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್ ಪೆರ್ದನೆ, ಎನ್ನೆಸ್ಸೆಸ್ ನಾಯಕಿ ನಫೀಸಾ ಸುಲೈಮ ಮುಂತಾದವರು ಮಾತನಾಡಿದರು.

ಹೈಯರ್ ಸೆಕೆಂಡರಿ ಪ್ರಾಂಶುಪಾಲ ಶಾಸ್ತ ಕುಮಾರ್ ಎ. ಸ್ವಾಗತಿಸಿದರು. ಎನ್ನೆಸ್ಸೆಸ್ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ಕುಮಾರ್ ಕ್ರಾಸ್ತಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net