More

    ನಾಳೆ ಕಾಂಗ್ರೆಸ್ ಭವನ ಉದ್ಘಾಟನೆ

    ಕೊರಟಗೆರೆ: ತಾಲೂಕು ಮಟ್ಟದ ಕಾಂಗ್ರೆಸ್ ಭವನ (ರಾಜೀವ್ ಭವನ) ಉದ್ಘಾಟನೆ ಮಾ.5 ಒಂದು ನಡೆಯಲಿದ್ದು, ಐತಿಹಾಸಿಕ ದಿನವಾಗಲಿದೆ ಎಂದು ಶಾಸಕ ಡಾ.ಜಿ.ಪರಮೇಶ್ವರ್ ಹೇಳಿದರು. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರದೊಂದಿಗೆ ಮಾತನಾಡಿ, ಎಐಸಿಸಿ ಅಧ್ಯಕ್ಷರು ಭವನ ಉದ್ಘಾಟಿಸಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಬಹುದೊಡ್ಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಚುನಾವಣೆ ಸಮೀಪಿಸುತ್ತಿರುವುದರಿಂದ ಇದೊಂದು ಬಹುತದೊಡ್ಡ ರಾಜಕೀಯ ರಣಕಹಳೆಯಾಗಲಿದೆ ಎಂದರು. ಕಾರ್ಯಕ್ರಮ ಉದ್ಘಾನೆಗೆ ರಾಷ್ಟ್ರ, ರಾಜ್ಯ, ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರು, ಮುಖಂಡರು ಮತ್ತು ಕಾರ್ಯಕರ್ತರು ಸೇರಿ 25 ಲಕ್ಷಕ್ಕೂ ಹೆಚ್ಚಿನ ಜನ ಪಾಲ್ಗೊಳ್ಳಲಿದ್ದಾರೆ ಎಂದರು. ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಶಾಸಕ ಕೆ.ಎನ್.ರಾಜಣ್ಣ, ಲಿಂಗಪ್ಪ, ಡಾ.ರಫೀಕ್ ಅಹಮದ್, ಕೌಶಲಾಭಿವೃದ್ಧಿ ನಿಮಗ ಮಂಡಳಿ ಅಧ್ಯಕ್ಷ ಮುರಳೀಧರ್ ಹಾಲಪ್ಪ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಚಂದ್ರಶೇಕರ್ ಗೌಡ, ಕೆಪಿಸಿಸಿ ಸದಸ್ಯ ಎ.ಡಿ ಬಲರಾಮಯ್ಯ ಇತರರು ಇದ್ದರು.

    ಬಿಜೆಪಿ ಭ್ರಷ್ಟಾಚಾರಕ್ಕೆ ಸಾಕ್ಷಿ ಸಿಕ್ಕಿದೆ: ಬಿಜೆಪಿ ಸರ್ಕಾರ ಶೇ.40 ಕಮಿಷನ್‌ಗೆ ಎಂದು ಕೇಳಿಬರುತ್ತಿದ್ದ ಆರೋಪಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಯಾವಾಗಲೂ ನಮಗೆ ಸಾಕ್ಷಿ ಕೊಡಿ ಎಂದು ಕೇಳುತ್ತಿದ್ದರು. ಈಗ ಮಾಡಾಳು ವಿರೂಪಾಕ್ಷಪ್ಪ ಅವರ ಮನೆ ಮತ್ತು ಕಚೇರಿಯಲ್ಲಿ ಕೋಟ್ಯಂತರ ರೂ.ಹಣ ಸಿಕ್ಕಿದೆ. ಆದರೆ ಅವರು ನಾವು ಅಡಕೆ ವ್ಯಾಪಾರ ಮಾಡುತ್ತಿದ್ದೇವೆ. ಇದು ನಮ್ಮ ವ್ಯಾಪಾರದ ಹಣ ಎಂದು ಹೇಳುತ್ತಿದ್ದಾರೆ. ಆದರೆ ಕಾನೂನಿನ ಪ್ರಕಾರ ಯಾರೊಬ್ಬರೂ 2 ಲಕ್ಷ ರೂ.ಗಿಂತ ಅಧಿಕ ನಗದು ರೂಪದಲ್ಲಿ ಹಣವನ್ನು ಇಟ್ಟುಕೊಳ್ಳಲು ಅವಕಾಶವಿಲ್ಲ. ಆದರೆ ಇಲ್ಲಿ ಕೋಟ್ಯಂತರ ಹಣ ಇಟ್ಟುಕೊಂಡಿದ್ದು ಎಷ್ಟು ಸರಿ? ಇದು ತನಿಖೆಯಿಂದ ದೃಢಪಡಬೇಕು ಎಂದು ಡಾ.ಜಿ.ಪರಮೇಶ್ವರ ಗುಡುಗಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts