More

    ಹಂಗ್ರಾಪುರ ಗ್ರಾಮದಲ್ಲಿ ಡೇರಿ ಕಟ್ಟಡ ಉದ್ಘಾಟನೆ

    ಮಳವಳ್ಳಿ: ಕೆಆರ್‌ಎಸ್ ನೀರಿನ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕೇಂದ್ರ ಸರ್ಕಾರದಿಂದ ನಿರಂತರವಾಗಿ ಅನ್ಯಾಯವಾಗುತ್ತಿರುವುದು ಒಂದೆಡೆಯಾದರೆ, ತಾಲೂಕಿನ ರೈತರಿಗೂ ಮೇಲ್ಭಾಗದಿಂದ ತೊಂದರೆಯಾಗುತ್ತಿದೆ ಎಂದು ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ತಿಳಿಸಿದರು.

    ತಾಲೂಕಿನ ಹಂಗ್ರಾಪುರ ಗ್ರಾಮದಲ್ಲಿ ಸೋಮವಾರ ಡೇರಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ನಾಲೆಗಳಿಗೆ ನೀರು ಬಿಡಿಸುವಂತೆ ತಾಲೂಕಿನ ರೈತರು ಒತ್ತಾಯಿಸುತ್ತಿದ್ದಾರೆ. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ನಾನು ಸುಳ್ಳು ಭರವಸೆ ನೀಡಲು ಸಾಧ್ಯವಿಲ್ಲ. 14 ಜಿಲ್ಲೆಗಳು ಬರಪೀಡಿತ ಪ್ರದೇಶವೆಂದು ಘೋಷಣೆಯಾಗಿದ್ದು, ಮುಂದಿನ ದಿನಗಳಲ್ಲಿ ಬರದ ತೀವ್ರತೆ ಹೆಚ್ಚಾಗಲಿದೆ. ಬರ ಪರಿಹಾರ ನಿರ್ವಹಣೆಗಾಗಿ ಕೇಂದ್ರ ಸರ್ಕಾರ ನಮ್ಮ ಪಾಲಿನ ಪರಿಹಾರವನ್ನು ಬಿಡುಗಡೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ತಾಲೂಕಿನ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ತಾಲೂಕು ಆಡಳಿತ ಕ್ರಮ ವಹಿಸಿದೆ ಎಂದು ಮಾಹಿತಿ ನೀಡಿದರು.
    ತಾಲೂಕಿನಲ್ಲಿ ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಕೆಲವರು ಅಕ್ರಮವಾಗಿ ಖಾತೆ ಮಾಡಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಇದನ್ನು ಬಯಲಿಗೆಳೆಯುವ ಮೂಲಕ ನ್ಯಾಯಸಮ್ಮತ ಆಡಳಿತ ನೀಡಲಾಗುವುದೆಂದು ತಿಳಿಸಿದರು.

    ಇದಕ್ಕೂ ಮುನ್ನ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು. ಗ್ರಾಪಂ ಅಧ್ಯಕ್ಷ ರವಿ, ಉಪಾಧ್ಯಕ್ಷೆ ನಾಗಮ್ಮ, ಸದಸ್ಯರಾದ ಪ್ರಭು, ರೂಪಾರಾಣಿ, ಮಂಗಳಮ್ಮ, ಮಹದೇವಮ್ಮ, ಪ್ರಕಾಶ್, ಚಿನ್ನಮ್ಮ, ಡೇರಿ ಅಧ್ಯಕ್ಷೆ ಚಂದ್ರಕಲಾ ಹಾಗೂ ಇತರೆ ನಿರ್ದೇಶಕರು ಮತ್ತು ಜಿಪಂ ಮಾಜಿ ಸದಸ್ಯ ಆರ್.ಎನ್.ವಿಶ್ವಾಸ್, ಮನ್ಮುಲ್ ತಾಲೂಕು ಮುಖ್ಯಸ್ಥ ಮಧುಶಂಕರ್, ಡೇರಿ ಕಾರ್ಯದರ್ಶಿ ಸುನೀತಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts