

ಪಡುಬಿದ್ರಿ: ಎಲ್ಲೂರು ಗ್ರಾಪಂ ವ್ಯಾಪ್ತಿಯ ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನದ ಉಪ ಸಾನ್ನಿಧ್ಯವಾದ ವೀರಾಂಜನೇಯ ದೇವರ ಗುಡಿ ಮುಂಭಾಗದಲ್ಲಿ ಸಣ್ಣ ನೀರಾವರಿ ಇಲಾಖೆ ಮೂಲಕ 2 ಕೋಟಿ ಅನುದಾನದಲ್ಲಿ ಅಭಿವೃದ್ಧಿಗೊಳಿಸಿದ ಕೆರೆಯನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಸೋಮವಾರ ಉದ್ಘಾಟಿಸಿದರು.
ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನ ಪ್ರಧಾನ ಅರ್ಚಕ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯ ಲಕ್ಷ್ಮೀನಾರಾಯಣ ತಂತ್ರಿ ಪಾದೂರು ಧಾರ್ಮಿಕ ಪೂಜೆ ನೆರವೇರಿಸಿದರು. ಎಲ್ಲೂರು ಗ್ರಾಪಂ ಅಧ್ಯಕ್ಷ ರವಿರಾಜ್ ರಾವ್, ಉಪಾಧ್ಯಕ್ಷೆ ಉಷಾ ದಯಾನಂದ್, ಶ್ರೀ ವಿಶ್ವೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರುಣಾಕರ ಶೆಟ್ಟಿ ಕಳತ್ತೂರು, ಮಾಜಿ ಅಧ್ಯಕ್ಷ ವೈ.ಪ್ರಪುಲ್ಲ ಶೆಟ್ಟಿ ಎಲ್ಲೂರುಗುತ್ತು, ಬಡಾ ಗ್ರಾಪಂ ಅಧ್ಯಕ್ಷ ಶಿವಕುಮಾರ್ ಮೆಂಡನ್, ಮಜೂರು ಗ್ರಾಪಂ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಜಿಪಂ ಮಾಜಿ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಸುಧಾಕರ್ ಶೆಟ್ಟಿ, ಕಾಪು ಪುರಸಭಾ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಅನಿಲ್ ಕುಮಾರ್, ಎಲ್ಲೂರು ಶಕ್ತಿಕೇಂದ್ರ ಸಂಚಾಲಕ ಸತೀಶ್ ಗುಡ್ಡೆಚ್ಚಿ, ಪ್ರಮುಖರಾದ ಪೈಯ್ಯರು ಶಿವರಾಮ ಶೆಟ್ಟಿ, ಯೋಗೀಶ್ ಶೆಟ್ಟಿ ಪಣಿಯೂರುಗುತ್ತು, ಕರುಣಾಕರ ಶೆಟ್ಟಿ ಪಣಿಯೂರುಗುತ್ತು, ಕುತ್ಯಾರು ನವೀನ್ ಶೆಟ್ಟಿ, ಪ್ರಸಾದ್ ಶೆಟ್ಟಿ ಕುತ್ಯಾರು, ಸಂತೋಷ್ ಪಿ. ಶೆಟ್ಟಿ ತೆಂಕರಗುತ್ತು, ರವೀಂದ್ರ ಪ್ರಭು ಮುದರಂಗಡಿ, ಶಿವರಾಮ ಭಂಡಾರಿ ಉಪಸ್ಥಿತರಿದ್ದರು.