More

    ಡಾ.ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್‌ ಉದ್ಘಾಟನೆ ಅ.16 ಕ್ಕೆ

    ಕಾರವಾರ/ಯಲ್ಲಾಪುರ: ಖ್ಯಾತ ಉದ್ಯಮಿ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ.ವಿಜಯ ಸಂಕೇಶ್ವರ ಅವರ ಹೆಸರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಶ್ವದರ್ಶನ ಎಜುಕೇಶನ್ ಸೊಸೈಟಿಯಲ್ಲಿ ಮಿಡಿಯಾ ಸ್ಕೂಲ್ ಸ್ಥಾಪನೆಯಾಗಿದ್ದು, ಅ.16 ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
    ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದಲು ಹಾಗೂ ಗಣಿ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸಲಿದ್ದಾರೆ. ಡಾ.ವಿಜಯ ಸಂಕೇಶ್ವರ ಆಶಯ ಭಾಷಣ ಮಾಡಲಿದ್ದಾರೆ. ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ, ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಬಿ.ಗುಡಸಿ ಅತಿಥಿಯಾಗಿರುವರು. ವಿಶ್ವದರ್ಶನ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಶ್ರೀನಿವಾಸ ಹೆಬ್ಬಾರ ಉಪಸ್ಥಿತರಿರುವರು. ಈ ಸಂದರ್ಭದಲ್ಲಿ ಡಾ.ವಿಜಯ ಸಂಕೇಶ್ವರ ಅವರೊಂದಿಗೆ ಸಂವಾದ ನಡೆಯಲಿದೆ.
    ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಡಾಕ್ಟರ್ ಆಫ್ ಸೈನ್ಸ್ ಪದವಿಯ ಗೌರವಕ್ಕೆ ಭಾಜನರಾದ ವಿಶ್ವದರ್ಶನ ಶಿಕ್ಷಣ ಸಮೂಹದ ನಿರ್ದೇಶಕ, ಮೈಸೂರು ಮರ್ಕಂಟೈಲ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಡಾ.ಎಚ್.ಎಸ್.ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಈ ಸಂದರ್ಭದಲ್ಲಿ ಅಭಿನಂದಿಸಿ, ಸನ್ಮಾನಿಸಲಾಗುವುದು.
    ಮಧ್ಯಾಹ್ನ 2.30 ಕ್ಕೆ ಪ್ರಸಿದ್ಧ ಕಲಾವಿದರಿಂದ ಕರ್ಣಭೇದನ ತಾಳಮದ್ದಲೆ ನಡೆಯಲಿದೆ. ಹಿಮ್ಮೇಳದಲ್ಲಿ ಅನಂತ ಹೆಗಡೆ ದಂತಳಿಗೆ, ನರಸಿಂಹ ಭಟ್ಟ ಹಂಡ್ರಮನೆ, ಪ್ರಮೋದ ಹೆಗಡೆ ಕಬ್ಬಿನಗದ್ದೆ ಭಾಗವಹಿಸುವರು. ವಿದ್ವಾನ್ ಉಮಾಕಾಂತ ಭಟ್ಟ ಕೆರೆಕೈ, ದಿವಾಕರ ಹೆಗಡೆ ಕೆರೆಹೊಂಡ, ಎಂ.ಎನ್.ಹೆಗಡೆ ಹಳವಳ್ಳಿ, ಡಾ.ಡಿ.ಕೆ.ಗಾಂವ್ಕರ ಅರ್ಥಧಾರಿಗಳಾಗಿ ಪಾತ್ರಚಿತ್ರಣ ನೀಡಲಿದ್ದಾರೆ ಎಂದು ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಕೋಣೆಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಉತ್ತಮ ಸ್ಪಂದನೆ:

    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಒಂದು ವರ್ಷದ ಪಿಜಿ ಡಿಪ್ಲೊಮಾ ಕೋರ್ಸ್ ಇದಾಗಿದ್ದು,ಕರ್ನಾಟಕ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿದೆ. ಪ್ರವೇಶ ಪರೀಕ್ಷೆ ನಡೆಸಿ ರಾಜ್ಯದ ವಿವಿಧೆಡೆ ಗಳ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಪ್ರವೇಶ ಪ್ರಕ್ರಿಯೆ ನಡೆಯುತ್ತಿದೆ.
    ಮುದ್ರಣ, ಡಿಜಿಟಲ್ ಹಾಗೂ ಟಿವಿ ಮಾಧ್ಯಮಗಳಲ್ಲಿ ವೃತ್ತಿ ಪರವಾಗಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಬೋಧನೆ ಮತ್ತು ತರಬೇತಿ ಇರಲಿದೆ. ಪ್ರಾಯೋಗಿಕ ಕಲಿಕೆಗೆ ಒತ್ತು ನೀಡ ಲಾಗುತ್ತದೆ. ಹಿರಿಯ ಪತ್ರಕರ್ತ ನಾಗರಾಜ ಇಳೆಗುಂಡಿ ಅವರು ಮೀಡಿಯಾ ಸ್ಕೂಲ್ ಪ್ರಾಂಶುಪಾಲರಾಗಿದ್ದು, ಹೆಸರಾಂತ, ನುರಿತ ಪತ್ರಕರ್ತರಿಂದ ತರಬೇತಿ ಮತ್ತು ಮಾರ್ಗದರ್ಶನ ಸಿಗಲಿದೆ.

    ಇದನ್ನೂ ಓದಿ: ಡಾ.ವಿಜಯ ಸಂಕೇಶ್ವರ ಮೀಡಿಯಾ ಸ್ಕೂಲ್​ಗೆ ಆನ್​ಲೈನ್ ನೋಂದಣಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts