ಪೆರ್ಲ: ನಾಲಂದ ಕಾಲೇಜಿನಲ್ಲಿ ನಾಲ್ಕು ವರ್ಷದ ಪದವಿ ಕೋರ್ಸ್‌ಗಳ ಉದ್ಘಾಟನೆ ಸೋಮವಾರ ನೆರವೇರಿತು. ಎಣ್ಮಕಜೆ ಗ್ರಾಪಂ ಅಧ್ಯಕ್ಷ ಸೋಮಶೇಖರ್ ಜೆ.ಎಸ್. ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪದವಿ ಶಿಕ್ಷಣ ಮತ್ತು ಪದವಿ ಶಿಕ್ಷಣ ನೀಡುವ ಕಾಲೇಜು ನಿರ್ಣಾಯಕ ಪಾತ್ರ ವಹಿಸುತ್ತದೆ. ನಾಲ್ಕು ವರ್ಷದ ಪದವಿ ಶಿಕ್ಷಣದಲ್ಲಿ ಕೇವಲ ಪಾಠ ಮಾತ್ರವಲ್ಲದೆ ಪಾಠದೊಂದಿಗೆ ವೃತ್ತಿ ಅನುಭವ ಕೊಡುವ ಮಹತ್ತರ ಅಂಶ ಒಳಗೊಂಡಿದೆ ಎಂದರು.
ಕ್ಯಾಂಪ್ರೋ ಉಪಾಧ್ಯಕ್ಷ ಶಂಕರ ನಾರಾಯಣ ಭಟ್ ಖಂಡಿಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಶಿಲ್ಪ ಸ್ವಾಗತಿಸಿದರು. ಸಿಬ್ಬಂದಿ ಕಾರ್ಯದರ್ಶಿ ಶ್ರೀನಿಧಿ ಕೆ. ವಂದಿಸಿದರು. ಪ್ರಾಧ್ಯಾಪಕಿ ಕಾವ್ಯ ಚಂದ್ರನ್ ನಿರೂಪಿಸಿದರು.
ಕೇರಳ ರಾಜ್ಯಮಟ್ಟದ ನಾಲ್ಕು ವರ್ಷದ ಪದವಿ ಕೋರ್ಸು ಉದ್ಘಾಟನೆಯ ನೇರ ಪ್ರಸಾರ ಪ್ರದರ್ಶಿಸಲಾಯಿತು. ಶಿಕ್ಷಕ ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.