More

    ಜಾನಪದ ಕಲಾಪ್ರಕಾರಗಳ ಉಚಿತ ತರಬೇತಿ ಶಿಬಿರ ಉದ್ಘಾಟನೆ

    ಮೈಸೂರು: ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ ವತಿಯಿಂದ ನಗರದ ರಂಗಾಯಣದ ಶ್ರೀರಂಗದಲ್ಲಿ ರಂಗಭೂಮಿ ಮತ್ತು ಜಾನಪದ ಕಲಾಪ್ರಕಾರಗಳ ಉಚಿತ ತರಬೇತಿ ಶಿಬಿರಕ್ಕೆ ಗುರುವಾರ ಚಾಲನೆ ನೀಡಲಾಯಿತು.

    ಹಿರಿಯ ರಂಗ ನಿರ್ದೇಶಕ ಸಿ.ಬಸವಲಿಂಗಯ್ಯ ಡೊಳ್ಳು ಬಾರಿಸುವ ಮೂಲಕ ಶಿಬಿರ ಉದ್ಘಾಟಿಸಿ ಮಾತನಾಡಿ, ಜನಪದ ಕಲೆಗಳು ಎಲ್ಲ ಕಲೆಗಳ ತಾಯಿ ಬೇರು. ಜನಪದ ಕಲೆಗಳ ಮೂಲಕ ಇತರ ಕಲೆಗಳು ಅರಳಿವೆ ಎಂದು ಹೇಳಿದರು.

    ಗೌತಮ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವಾ ಟ್ರಸ್ಟ್ ವತಿಯಿಂದ ನಗರದ ರಂಗಾಯಣದ ಶ್ರೀರಂಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಂಗಭೂಮಿ ಮತ್ತು ಜಾನಪದ ಕಲಾಪ್ರಕಾರಗಳ ಉಚಿತ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

    ವೇದಿಕೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಹಿರಿಯ ರಂಗಕರ್ಮಿ ಕೆ.ಆರ್. ಸುಮತಿ, ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಎನ್. ನಾಗೇಂದ್ರ, ಟ್ರಸ್ಟ್ ಅಧ್ಯಕ್ಷ ಕೃಷ್ಣಮೂರ್ತಿ ತಲಕಾಡು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts