More

    ಗಾಣಿಗ ಸಮುದಾಯ ಭವನ ಉದ್ಘಾಟನೆ ನಾಳೆ

    ಗದಗ: ಅಖಿಲ ಭಾರತ ಗಾಣಿಗ ವಿದ್ಯಾ ಹಾಗೂ ಉದ್ಯೋಗವರ್ಧಕ ಟ್ರಸ್ಟ್ ವತಿಯಿಂದ ನಗರದ ವಿವೇಕಾನಂದ ನಗರದಲ್ಲಿ ನಿರ್ವಿುಸಿರುವ ಗಾಣಿಗ ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮ ನ. 30ರಂದು ಬೆಳಗ್ಗೆ 10.30ಕ್ಕೆ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಗೌರವಾಧ್ಯಕ್ಷ ಚಂದ್ರಶೇಖರಪ್ಪ ಬಡ್ನಿ ಹೇಳಿದರು.

    ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 3.5 ಕೋಟಿ ರೂ. ವೆಚ್ಚದಲ್ಲಿ ಭವನ ನಿರ್ವಿುಸಲಾಗಿದೆ. 20 ವರ್ಷಗಳ ಹಿಂದೆಯೇ ಸಮಾಜದ ಮುಖಂಡರ ಸಹಾಯ, ಸಹಕಾರದಿಂದ ನಗರದ ವಿವೇಕಾನಂದ ನಗರದಲ್ಲಿ ಮೂರು ಎಕರೆ ಜಾಗ ಖರೀದಿಸಲಾಗಿತ್ತು. ಇದೀಗ ಅದೇ ಸ್ಥಳದಲ್ಲಿ ಸಮುದಾಯ ಭವನ ನಿರ್ವಿುಸಲಾಗಿದೆ. ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಭವನ ಉದ್ಘಾಟಿಸುವರು ಎಂದರು.

    ಭೈರನಹಟ್ಟಿ ಶಾಂತಲಿಂಗ ಸ್ವಾಮೀಜಿ, ಅಧ್ಯಾತ್ಮ ವಿದ್ಯಾಶ್ರಮದ ನೀಲಮ್ಮತಾಯಿ ಅಸುಂಡಿ, ನವದೆಹಲಿ ತೋಂಟದಾರ್ಯ ಶಾಖಾಮಠದ ಮಹಾಂತ ದೇವರು ಸಮ್ಮುಖ ವಹಿಸುವರು. ಟ್ರಸ್ಟ್ ಗೌರವಾಧ್ಯಕ್ಷ ಚಂದ್ರಶೇಖರಪ್ಪ ಬಡ್ನಿ ಅಧ್ಯಕ್ಷತೆ ವಹಿಸುವರು. ಸಮುದಾಯ ಭವನ ಕಟ್ಟಡ ಸಮಿತಿ ಅಧ್ಯಕ್ಷ ನಿಂಗಪ್ಪ ಕೆಂಗಾರ, ಟ್ರಸ್ಟ್ ಅಧ್ಯಕ್ಷ ಬಸವರಾಜ ಬಿಂಗಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.

    ಸಮುದಾಯ ಭವನ ಕಟ್ಟಡ ಸಮಿತಿ ಅಧ್ಯಕ್ಷ ನಿಂಗಪ್ಪ ಕೆಂಗಾರ ಮಾತನಾಡಿ, ಸಮುದಾಯ ಭವನ ನಿರ್ವಣಕ್ಕೆ ಗಾಣಿಗ ಸಮಾಜ ಬಾಂಧವರಿಂದ 1.5 ಕೋಟಿ ರೂ. ಸಂಗ್ರಹಿಸಲಾಗಿದೆ. ಹಿಂದುಳಿದ ವರ್ಗಗಳ ಇಲಾಖೆಯಿಂದ 50 ಲಕ್ಷ ರೂ, ಶಾಸಕ ಎಚ್.ಕೆ. ಪಾಟೀಲ, ಸಂಸದ ಶಿವಕುಮಾರ ಉದಾಸಿ, ವೀರಣ್ಣ ಮತ್ತಿಕಟ್ಟಿ, ಶ್ರೀನಿವಾಸ ಮಾನೆ, ನಾಗರಾಜ ಛಬ್ಬಿ, ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ, ಸಂಸದ ಪಿ.ಸಿ. ಗದ್ದಿಗೌಡರ, ಅಜ್ಜಣ್ಣ ಪಾಟೀಲ ಹೀಗೆ ಹಲವಾರು ಮುಖಂಡರು ಸಮುದಾಯ ಭವನಕ್ಕೆ ಧನ ಸಹಾಯ ಮಾಡಿದ್ದಾರೆ ಎಂದರು. ಮುಂಬರುವ ದಿನಗಳಲ್ಲಿ ಸಮುದಾಯ ಭವನದಲ್ಲಿಯೇ ಸಮಾಜದ ಬಡ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯ ಆರಂಭಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಮುರುಘರಾಜೇಂದ್ರ ಬಡ್ನಿ, ಬಸವರಾಜ ಬಿಂಗಿ, ಗಿರಿಯಪ್ಪ ಅಸೂಟಿ, ಅಶೋಕ ಮಂದಾಲಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts