13ರಂದು ಎಡನೀರು ಮಠದಲ್ಲಿ ಗುರು ಭವನ ಉದ್ಘಾಟನೆ

blank

ಬದಿಯಡ್ಕ: ಸಂಪಾಜೆ ಶ್ರೀ ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನದಿಂದ ಸೇವಾರೂಪದಲ್ಲಿ ಎಡನೀರು ಮಠದ ದೇವರಿಗೆ ಸಮರ್ಪಿಸಲ್ಪಟ್ಟ ಗುರು ಭವನದ ಉದ್ಘಾಟನಾ ಸಮಾರಂಭ ಜು.13ರಂದು ಜರುಗಲಿದೆ. ಅಂದು ಬೆಳಗ್ಗೆ ಮಹಾಗಣಪತಿ ಹೋಮದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಗುರುಭವನ ಉದ್ಘಾಟಿಸಲಿದ್ದಾರೆ. ಕಾಸರಗೋಡು ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉಪಸ್ಥಿತರಿರುವರು. ಸಂಜೆ 6ರಿಂದ ವಿದುಷಿ ನಿತ್ಯಶ್ರೀ ಮಹಾದೇವ್ ಚೆನ್ನೈ ಹಾಡುಗಾರಿಕೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಜರುಗಲಿದೆ.

ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 9.30ಕ್ಕೆ ನಡೆಯಲಿರುವ ಸನಾತನ ಸಂತ ಸಮಾಗಮದಲ್ಲಿ ಕಾಣಿಯೂರು ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದರು, ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಶ್ರೀ ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರತೀರ್ಥ ಶ್ರೀಪಾದರು, ಶ್ರೀ ಕೊಂಡೆವೂರು ಮಠದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ, ಶ್ರೀ ಮೂಡುಬಿದಿರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿ, ಶ್ರೀ ಒಡಿಯೂರು ಮಠದ ಶ್ರೀ ಗುರುದೇವಾನಂದ ಸ್ವಾಮೀಜಿ, ಶ್ರೀ ಮಾಣಿಲ ಮಠದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಶ್ರೀ ಕಣಿಯೂರು ಮಠದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಪಶುಸಂಗೋಪನೆ ಮತ್ತು ಮೀನುಗಾರಿಕೆ ರಾಜ್ಯ ಸಚಿವ ಜಾರ್ಜ್ ಕುರಿಯನ್ ಉಪಸ್ಥಿತರಿರುವರು. ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖರಾದ ಕಜಂರ್ಪಾಡಿ ಸುಬ್ರಹ್ಮಣ್ಯ ಭಟ್ ಪ್ರಾಸ್ತಾವಿಕ ಹಾಗೂ ಆಶಯ ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ 1.30ರಿಂದ 3.30ರ ತನಕ ಸುಂದೋಪಸುಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…