More

    ೫೦ ಎಕರೆಯಲ್ಲಿ ವಿವಿ ಕ್ಯಾಂಪಸ್

    ಆಳಂದ: ತಾಲೂಕಿನ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗಲು ಎಲೆನಾವದಗಿ ಹತ್ತಿರ ೫೦ ಎಕರೆ ಪ್ರದೇಶದಲ್ಲಿ ವಿಶ್ವವಿದ್ಯಾಲಯ ಕ್ಯಾಂಪಸ್ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಲಹೆಗಾರ ಬಿ.ಆರ್.ಪಾಟೀಲ್ ಹೇಳಿದರು.

    ಗಡಿ ಭಾಗದ ಖಜೂರಿ ಗ್ರಾಮದ ಹೊರ ವಲಯದಲ್ಲಿ ೧೬.೩೩ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ (ಪಜಾ) ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿ, ಐಟಿಐ ಕಾಲೇಜು, ಪಿಜಿ ಸೆಂಟರ್, ಐದು ಸರ್ಕಾರಿ ಪ್ರೌಢ ಶಾಲೆ, ಐದು ಪಿಯು ಕಾಲೇಜು ಮಂಜೂರು ಮಾಡಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭವಾಗಲಿವೆ ಎಂದರು.

    ವಸತಿ ಶಾಲೆಯಲ್ಲಿ ಮಕ್ಕಳಿಗೆ ಒಳ್ಳೆ ಆಹಾರ ಕೊಡಬೇಕು. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತದೆ. ಮುಂಬರುವ ದಿನಗಳಲ್ಲಿ ಇಂದಿರಾ ಗಾಂಧಿ ವಸತಿ ನಿಲಯಕ್ಕೆ ಶಾಶ್ವತ ಕುಡಿಯವ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದರು.

    ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಾವಿ ಕರಣಗಿ ಮಾತನಾಡಿ, ವಸತಿ ನಿಲಯದಲ್ಲಿ ೪೦ ಕೊಠಡಿ, ಬಯಲು ಪ್ರದೇಶ, ಆಟದ ಮೈದಾನ,ವಿದ್ದು, ೨೪ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ೧೦ ಶಿಕ್ಷಕರು, ಏಳು ಡಿ. ಗ್ರೂಪ್ ನೌಕರರಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಇದ್ದು, ಶೀಘ್ರ ಶಾಶ್ವತ ಪರಿಹಾರ ವ್ಯವಸ್ಥೆ ಆಗಬೇಕು ಎಂದರು.

    ಗ್ರಾಪಂ ಅಧ್ಯಕ್ಷೆ ಸುನೀತಾ ಮಗರೆ ಅಧ್ಯಕ್ಷತೆ ವಹಿಸಿದರು. ಕೆಪಿಸಿಸಿ ಸದಸ್ಯ ರಾಜಶೇಖರ ಚಿತಲಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ ಸಾವಳೇಶ್ವರ, ಸಮಾಜ ಇಲಾಖೆ ಸಹಾಯಕ ನಿರ್ದೇಶಕ ರಾಮಚಂದ್ರ ಗೋಳಾ, ಭೀಮರಾವ ಢಗೆ, ವೈಜನಾಥ ತಡಕಲೆ, ಗಂಗಾಧರ ಕುಂಬಾರ ಇತರರಿದ್ದರು. ಪ್ರಾಂಶುಪಾಲ ಶಾಮರಾಯ ಅರವತ್ತು ಸ್ವಾಗತಿಸಿ, ನಿರೂಪಣೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts