More

    ಗ್ಯಾರಂಟಿ ಯೋಜನೆ ಬಡವರಿಗೆ ವರ

    ಭಾಲ್ಕಿ: ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಬಡ ಜನರಿಗೆ ವರದಾನವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

    ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ ಗುರುವಾರ ಆಯೋಜಿಸಿದ್ದ ಜನಸ್ಪಂದನ ಮತ್ತು ಗ್ಯಾರಂಟಿ ಸಮಾವೇಶ ಉದ್ಘಾಟಿಸಿದ ಅವರು, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಮತ್ತು ಉಚಿತ ವಿದ್ಯುತ್ ಕೊಡುವ ಭರವಸೆ ನೀಡಲಾಗಿತ್ತು. ಅದರಂತೆ ಅಧಿಕಾರಕ್ಕೆ ಬರುತ್ತಲೇ ಭರವಸೆ ಈಡೇರಿಸಿ ನುಡಿದಂತೆ ನಡೆಯಲಾಗಿದೆ ಎಂದರು.

    ೧೦ ತಿಂಗಳಿಂದ ಸಿದ್ದರಾಮಯ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಪ್ರತಿಪಕ್ಷದವರು ಗ್ಯಾರಂಟಿ ಯೋಜನೆಗಳು ಕೇವಲ ಲೋಕಸಭಾ ಚುನಾವಣೆವರೆಗೆ ಮುಂದುವರಿಯುತ್ತವೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಇರೋವರೆಗೆ ಇವು ಮುಂದುವರಿಯಲಿವೆ ಎಂದು ಭರವಸೆ ನೀಡಿದರು.

    ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟೆ, ಅಮೃತರಾವ ಚಿಮಕೋಡೆ, ಡಿಸಿ ಗೋವಿಂದರಡ್ಡಿ, ಎಸ್‌ಪಿ ಚನ್ನಬಸವಣ್ಣ ಲಂಗೋಟಿ, ಜಿಪಂ ಸಿಇಒ ಡಾ.ಗಿರೀಶ್ ಬದೋಲೆ, ಸಹಾಯಕ ಆಯುಕ್ತ ಪ್ರಕಾಶ ಕುದರೆ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ., ತಹಸೀಲ್ದಾರ್ ಶ್ರೀಯಂಕಾ ಧನಶ್ರೀ, ತಾಪಂ ಇಒ ಸೂರ್ಯಕಾಂತ ಬಿರಾದಾರ ಇತರರಿದ್ದರು.

    ಸಮಸ್ಯೆ ಆಲಿಸಿದ ಮಂತ್ರಿ: ಜನಸ್ಪಂದನ ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಖಂಡ್ರೆ ಜನರ ಕುಂದುಕೊರತೆಗಳನ್ನು ಆಲಿಸಿದರು. ತಾಲೂಕಿನ ವಿವಿಧೆಡೆಯಿಂದ ಬಂದಿದ್ದ ಸಾವಿರಾರು ಜನ ಅಹವಾಲು ಸಲ್ಲಿಸಿದರು. ಸಚಿವರು ಸ್ಥಳದಲ್ಲೇ ಒಂದಿಷ್ಟು ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು. ಉಳಿದವುಗಳನ್ನು ವಾರದೊಳಗೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗೃಹಲಕ್ಷ್ಮಿ ಯೋಜನೆಯಡಿ ಹೆಚ್ಚು ಅರ್ಜಿ ಬಂದಿರುವುದು ಕಂಡು ಬಂತು.

    ಬಡಜನರ ಸಮಸ್ಯೆ ಬಗೆಹರಿಸಲು ಜಿಲ್ಲಾದ್ಯಂತ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ತಾಲೂಕಿನಲ್ಲೂ ಸಮಾವೇಶ ಹಮ್ಮಿಕೊಂಡು ಅರ್ಹರಿಗೆ ಸರ್ಕಾರದ ಯೋಜನೆಗಳನ್ನು ಮುಟ್ಟಿಸುವ ಪ್ರಯತ್ನ ಮಾಡಲಾಗಿದೆ.
    | ಈಶ್ವರ ಖಂಡ್ರೆ ಜಿಲ್ಲಾ ಉಸ್ತುವಾರಿ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts