

ಬೆಳ್ತಂಗಡಿ: ಇಂದಿನ ಬದುಕು ಸಾಹಿತ್ಯದ ಸಂಪರ್ಕದಿಂದ ದೂರವಾಗುತ್ತಿದೆ. ಪುಸ್ತಕ ಓದುವ ಹವ್ಯಾಸ ಮಕ್ಕಳಲ್ಲಿ ದೂರವಾಗುತ್ತಿದೆ. ಕಳೆದು ಹೋಗುತ್ತಿರುವ ಸಾಹಿತ್ಯಾಭಿರುಚಿ ಮತ್ತೆ ಬೆಳೆಯಬೇಕು ಎಂದು ವಿಮರ್ಶಕ ಡಾ.ಎಚ್.ಎಸ್.ಸತ್ಯನಾರಾಯಣ ಹೇಳಿದರು.
ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ ಕನ್ನಡ ವಿಭಾಗದ 2025-26ನೇ ಸಾಲಿನ ಕಾರ್ಯಚಟುವಟಿಕೆ ಹಾಗೂ ಕನ್ನಡ ಸಂಘ ಉದ್ಘಾಟಿಸಿ ಮಾತನಾಡಿದರು.
ಪ್ರಾಂಶುಪಾಲ ಡಾ.ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕನ್ನಡ ಸಹ ಪ್ರಾಧ್ಯಾಪಕ ಡಾ.ರಾಜಶೇಖರ ಹಳೆಮನೆ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು ತಯಾರಿಸಿದ ಸಿರಿಗನ್ನಡ ಭಿತ್ತಿಪತ್ರಿಕೆಯನ್ನು ಅನಾವರಣಗೊಳಿಸಲಾಯಿತು.
ಸಂಘದ ಪದಾಧಿಕಾರಿಗಳಾದ ಮಾನಸ, ಅಮೃತ, ರಂಗಸ್ವಾಮಿ, ಶಿಫಾನ, ಸ್ವಪ್ನಾ, ಸಂಕೇತ್, ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿಭಾಗ ಮುಖ್ಯಸ್ಥೆ ಡಾ.ಬೋಜಮ್ಮ ಕೆ.ಎನ್. ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸಂಕೇತ ವಂದಿಸಿದರು. ಜೀವಿತಾ ಕಾರ್ಯಕ್ರಮ ನಿರೂಪಿಸಿದರು.