

ವಿಜಯವಾಣಿ ಸುದ್ದಿಜಾಲ ಪುತ್ತೂರು ಗ್ರಾಮಾಂತರ
ದ.ಕ. ಮತ್ತು ಉಡುಪಿ ಭಾಗದ ಜನತೆಯ ಬದುಕಿಗೆ ಆಧಾರ ಅಡಕೆ. ಅಡಕೆ ಕೃಷಿ ನಾಶವಾದರೆ ಮತ್ತು ಧಾರಣೆ ಕುಸಿದರೆ ಈ ಭಾಗದ ಜನತೆ ಸಂಕಷ್ಟಕ್ಕೊಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಅಡಕೆ ಬೆಳೆಗೆ ಬಾಧಿಸುವ ರೋಗಗಳ ಮತ್ತು ಅಡಕೆಯ ಪರ್ಯಾಯ ಉಪಯೋಗದ ಕುರಿತು ಸಂಶೋಧನೆ ಅಗತ್ಯ ಎಂದು ಶಾಸಕ ಅಶೋಕ್‌ಕುಮಾರ್ ರೈ ಹೇಳಿದರು.
ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಆವರಣದಲ್ಲಿ, ಮಂಗಳೂರು ಕೃಷಿಕರ ಸಹಕಾರಿ ಸಂಘದ ವತಿಯಿಂದ ಕಾವು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಸಹಯೋಗ ಮತ್ತು ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಸಹಕಾರದೊಂದಿಗೆ ಮಂಗಳವಾರ ಆರಂಭಿಸಲಾದ ಅಡಕೆ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
ಅಡಕೆ ಖರೀದಿಗೆ ಚಾಲನೆ ನೀಡಿದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಾಲ್ಯೋಟ್ಟು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ ಬಳೆಜ್ಜ, ಅಧ್ಯಕ್ಷತೆ ವಹಿಸಿದ್ದ ಕಾವು ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಅರಿಯಡ್ಕ ಗ್ರಾಪಂ ಅಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಮಾಸ್ ಸಂಸ್ಥೆಯ ನಿರ್ದೇಶಕ ಎಂ.ಬಿ.ನಿತ್ಯಾನಂದ ಮುಂಡೋಡಿ ಮಾತನಾಡಿದರು. ಕೃಷಿಕರಾದ ಭಾಸ್ಕರ ರೈ ಕಂಟ್ರಮಜಲು, ಶರತ್‌ಕುಮಾರ್ ರೈ, ಸೀತಾರಾಮ ಭಟ್ ಬರಕ್ಕೆರೆ ಅಭಿಪ್ರಾಯ ವ್ಯಕ್ತಪಡಿಸಿದರು.
ಮಾಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಮಹಾಬಲೇಶ್ವರ ಭಟ್, ಮುಖ್ಯ ಮಾರುಕಟ್ಟೆ ಅಧಿಕಾರಿ ಕೆ.ಎಂ.ಲೋಕೇಶ್, ನಿರ್ದೇಶಕರಾದ ಬೆಳ್ಳೆ ಶಿವಾಜಿ ಎಸ್.ಸುವರ್ಣ, ಸುಧಾ ಎಸ್.ರೈ ಪುಣ್ಚಪ್ಪಾಡಿ, ಪಿ.ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಪುಷ್ಪರಾಜ ಅಡ್ಯಂತಾಯ ಮಂಚಿ ಮತ್ತಿತರರು ಉಪಸ್ಥಿತರಿದ್ದರು.
ಮಾಸ್ ಸಂಸ್ಥೆಯ ಅಧ್ಯಕ್ಷ ಸಹಕಾರ ರತ್ನ ಕೆ.ಸೀತಾರಾಮ ರೈ ಸವಣೂರು ಸ್ವಾಗತಿಸಿದರು. ಕಾವು ಸಿಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ವಂದಿಸಿದರು. ಸವಣೂರು ಸಿ.ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್ ಮತ್ತು ಕಾವು ಸಿಎ ಬ್ಯಾಂಕ್ ಸಿಬ್ಬಂದಿ ಸುನೀಲ್ ಕಾರ್ಯಕ್ರಮ ನಿರೂಪಿಸಿದರು.
ಮಾಸ್ ಸಂಸ್ಥೆ ವ್ಯವಹಾರ ದ್ವಿಗುಣಗೊಳಿಸುವ ಉದ್ದೇಶವಿದೆ. ಈ ಹಿಂದೆ ಸುಳ್ಯದಲ್ಲಿ ಮುಚ್ಚಲಾಗಿದ್ದ ಅಡಕೆ ಸಂಸ್ಕರಣಾ ಘಟಕ ಮತ್ತೆ ಸುಸಜ್ಜಿತಗೊಳಿಸಿ ಈ ಭಾಗದ ಅಡಕೆಯನ್ನು ಇಲ್ಲೇ ಸಂಸ್ಕರಣೆ ಮಾಡುವ ವ್ಯವಸ್ಥೆ ಆಗುತ್ತಿದೆ. ಅಡಕೆ ಖರೀದಿ ಮಾಡುವ ಬಗ್ಗೆ ಪದವೀಧರ ಅಭ್ಯರ್ಥಿಗಳನ್ನು 13 ಸಾವಿರ ರೂ. ಸ್ಪೈಪೆಂಡ್ ಸಹಿತ ಟ್ರೈನಿಗಳಾಗಿ ಸೇರಿಸಿ ಅವರಿಗೆ ಅಡಕೆ ಬಗ್ಗೆ 3 ತಿಂಗಳ ತರಬೇತಿ ನೀಡಿ ಖರೀದಿ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಪ್ರಕ್ರಿಯೆಗಳು ಆರಂಭಗೊಂಡಿದೆ. ಮಾಸ್ ಸಂಸ್ಥೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಸರ್ಕಾರದಿಂದ 5 ಕೋಟಿ ರೂ. ಷೇರು ಬಂಡವಾಳ ಕೇಳಿದ್ದೇವೆ ಎಂದು ಮಾಸ್ ಸಂಸ್ಥೆಯ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಹೇಳಿದರು.
ಸೀತಾರಾಮ ರೈ ಅಧ್ಯಕ್ಷರಾಗಿ ಅಧಿಕಾರ ವಹಿಸಿದ ಅತ್ಯಲ್ಪ ಕಾಲದಲ್ಲೇ ಮಾಸ್ ಸಂಸ್ಥೆ ಅಭಿವೃದ್ಧಿಯತ್ತ ಸಾಗಿದೆ. ಹಣದ ಕೊರತೆ ನೀಗಿಸುವ ಕೆಲಸ ಅವರು ಮಾಡಿದ್ದಾರೆ. ಅಡಕೆ ಬೆಳೆಗಾರರಿಗೆ ಪ್ರಯೋಜನವಾಗಬೇಕಾದರೆ ಮಾರುಕಟ್ಟೆ ಪೈಪೋಟಿ ಇರಬೇಕು. ಶಶಿಕುಮಾರ್ ಬಾಲ್ಯೋಟ್ಟು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ https://www.vijayavani.net/inauguration-of-cet-neet-classes