ವೇಣೂರಿನಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಶಾಖೆ: 15ನೇ ಬ್ರಾಂಚ್ ಪ್ರಾರಂಭದ ಸಂಭ್ರಮ : 14ರಂದು ಉದ್ಘಾಟನೆ

logo
Published on

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ 15ನೇ ವೇಣೂರು ಶಾಖೆಯ ಉದ್ಘಾಟನಾ ಸಮಾರಂಭದ ಸಂಭ್ರಮದಲ್ಲಿದೆ. ವೇಣೂರಿನ ಮಹಾವೀರ ನಗರದಲ್ಲಿರುವ ಮಂಜುಶ್ರೀ ಕಾಂಪ್ಲೆಕ್ಸ್‌ನಲ್ಲಿ ಜು.14ರಂದು ಬೆಳಗ್ಗೆ 10.30ಕ್ಕೆ ಶಾಖೆ ಉದ್ಘಾಟನೆಗೊಳ್ಳಲಿದೆ.

ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ನಾರಾಯಣ ಗುರು ವಿಚಾರ ವೇದಿಕೆಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಜಿ.ಪಂ.ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಚರ್ಚಿನ ಧರ್ಮಗುರು ಫಾದರ್ ಪೀಟರ್ ಅರಾನ್ಹ, ವೇಣೂರು ಶ್ರೀ ಮಾಹಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಜಯರಾಮ ಶೆಟ್ಟಿ, ವೇಣೂರು ಜುಮ್ಮಾ ಮಸೀದಿ ಅಧ್ಯಕ್ಷ ಝಕ್ರಿಯಾ, ಬೆಳ್ತಂಗಡಿ ಸಿಡಿಒ ಅಭಿವೃದ್ಧಿ ಅಧಿಕಾರಿ ಪ್ರತಿಮಾ, ವೇಣೂರು ವಲಯ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ವೇಣೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಪೂಜಾರಿ, ಸಿದ್ಧಕಟ್ಟೆ ಕಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ವಿನಯ್ ಕುಮಾರ್ ಜೈನ್ ಪ್ರಗತಿಪರ ಕೃಷಿಕ ಬಾಲಕೃಷ್ಣ ಶೆಟ್ಟಿ ರಾಯಿ, ಕಟ್ಟಡ ಮಾಲೀಕ ಕೆ.ಉದಯ ಕುಮರ್ ಕಂಬಳಿ ಭಾಗವಹಿಸುವರು.

ಮುಂದಿನ ದಿನಗಳಲ್ಲಿ ವೇಣೂರು ಶಾಖೆಯಲ್ಲಿ ಈ ಸ್ಟ್ಯಾಂಪಿಂಗ್ ಸೌಲಭ್ಯವನ್ನು ಕಲ್ಪಿಸಲಾಗುವುದು. ಸಂಘ ಸಜೀಪಮೂಡ ಗ್ರಾಮದ ಸುಭಾಷ್ ನಗರದಲ್ಲಿ ಅರ್ಧ ಎಕರೆ ಜಾಗ ಖರೀದಿಸಿದೆ.

1991ರಲ್ಲಿ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಸುಭಾಷ್‌ನಗರದ ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಪ್ರಾರಂಭಗೊಂಡ ಬ್ಯಾಂಕ್, 2005 ನವೆಂಬರ್ 18ರಂದು ಬೊಳ್ಳಾಯಿಯಲ್ಲಿ ಬ್ಯಾಂಕಿಂಗ್ ವ್ಯವಹಾರ ಆರಂಭಿಸಿತು. ಹಂತ ಹಂತವಾಗಿ ಬೋಳಂತೂರು, ಚೇಳೂರು, ಫಜೀರು, ವಾಮದಪದವು, ಸಿದ್ದಕಟ್ಟೆ, ಅಣ್ಣಳಿಕೆ, ಮಾರ್ನಬೈಲು, ಮಣಿಹಳ್ಳ, ಕಾವಳ ಮೂಡೂರು ಎನ್.ಸಿ.ರೋಡು, ಸಾಲೆತ್ತೂರು, ಕಂಬಳಬೆಟ್ಟು, ಪುಣಚ, ಬಿ.ಸಿ.ರೋಡಿನಲ್ಲಿ ಶಾಖೆಗಳನ್ನು ತೆರೆದಿದೆ.

ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಿಂದ ಮೊದಲ್ಗೊಂಡು ಎಲ್ಲ ಸಿಬ್ಬಂದಿ ಮಹಿಳೆಯರೇ ಆಗಿದ್ದು ಮಹಿಳೆಯರ ಉದ್ಯೋಗ ಹಾಗೂ ಸ್ವಾವಲಂಬಿ ಬದುಕಿಗೆ ಸಂಘ ಅವಕಾಶ ನೀಡಿದೆ.

ಅಧ್ಯಕ್ಷರಾಗಿ ಕೆ.ಸಂಜೀವ ಪೂಜಾರಿ, ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಬೀಡಿನಪಾಲು, ನಿರ್ದೇಶಕರಾಗಿ ರಮೇಶ್ ಅನ್ನಪ್ಪಾಡಿ, ವಿಠಲ ಬೆಳ್ಚಾಡ ಚೇಳೂರು, ಅಶೋಕ್ ಪೂಜಾರಿ ಕೋಮಾಲಿ, ಗಿರೀಶ್ ಕುಮಾರ್ ಪೆರ್ವ, ಜಯಶಂಕರ್ ಕಾನ್ಸಾಲೆ, ಕೆ.ಸುಜಾತ ಎಂ., ವಾಣಿವಸಂತ್, ಅರುಣ್ ಕುಮಾರ್ ಎಂ., ಆಶಿಶ್ ಪೂಜಾರಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಮಮತಾ ಜಿ.ಸಂಘವನ್ನು ಮುನ್ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net