ಎನ್ನೆಸ್ಸೆಸ್ ವಾರ್ಷಿಕ ಚಟುವಟಿಕೆ ಉದ್ಘಾಟನೆ

nss
Published on

ಬೆಳ್ತಂಗಡಿ : ಇಲ್ಲಿನ ಶ್ರೀ ಗುರುದೇವಾ ಪ್ರಥಮದರ್ಜೆ ಕಾಲೇಜಿನ 2024-25ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಕಾರ್ಯಚಟುವಟಿಕೆಗಳನ್ನ್ನು ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಹಾಗೂ ರಾಷ್ಟೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಹರಿಪ್ರಸಾದ್ ಎಸ್.ಉದ್ಘಾಟಿಸಿದರು.

ಪ್ರಾಂಶುಪಾಲೆ ಡಾ.ಸವಿತಾ ಅಧ್ಯಕ್ಷತೆ ವಹಿಸಿದ್ದರು. ಗುರುದೇವ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುಕೇಶ್ ಕುಮಾರ್ ಪ್ರತಿಜ್ಞಾವಿಧಿ ಬೋಧಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಅನಿಸಿಕೆ ವ್ಯಕ್ತಪಡಿಸಿದರು. ಸಹಯೋಜನಾಧಿಕಾರಿ ಹಾಗೂ ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ವೇತಾ ವ್ಯಕ್ತಿ ಪರಿಚಯ ಮಾಡಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಹಾಗೂ ಉಪಪ್ರಾಂಶುಪಾಲ ಹಾಗೂ ಯೋಜನಾಧಿಕಾರಿ ಬಿ.ಎ ಶಮಿವುಲ್ಲಾ ಸ್ವಾಗತಿಸಿದರು. ಸಹಯೋಜನಾಧಿಕಾರಿ ಹಾಗೂ ಕನ್ನಡ ಭಾಷಾ ಉಪನ್ಯಾಸಕ ಸತೀಶ್.ಸಿ ಸಾಲ್ಯಾನ್ ವಂದಿಸಿದರು ವಾಣಿಜ್ಯಶಾಸ್ತ್ರ ಉಪನ್ಯಾಸಕ ಶಿವರಾಜ್ ಗಟ್ಟಿ ಸಹಕರಿಸಿದರು. ರಾಷ್ಟ್ರೀಯ ಸೇವಾಯೋಜನೆಯ ನಾಯಕ ಮಿಥುನ್, ನಾಯಕಿ ಚಂದನ ಹಾಗೂ ಎಲ್ಲ ಸ್ವಯಂಸೇವಕರು, ಕಾಲೇಜಿನ ಆಡಳಿತ ಮಂಡಳಿ, ವಿದ್ಯಾರ್ಥಿಗಳು, ಉಪನ್ಯಾಸಕ ವೃಂದ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net