ಸೋಮವಾರಪೇಟೆ: ಜೇಸಿಐ ಪುಷ್ಪಗಿರಿ ಸೋಮವಾರಪೇಟೆಯ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಫೆ.26ರಂದು ಸ್ಥಳೀಯ ಸಂಕಪ್ಪ ಸಭಾಂಗಣದಲ್ಲಿ ನಡೆಯಲಿದೆ ಎಂದು ಜೇಸಿಐ ನಿಯೋಜಿತ ಅಧ್ಯಕ್ಷೆ ಜಗದಾಂಬ ಗುರುಪ್ರಸಾದ್ ತಿಳಿಸಿದ್ದಾರೆ.
ಅಂದು ಸಂಜೆ 6.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಜೇಸಿಐ ವಲಯ ಅಧ್ಯಕ್ಷ ವಿಜಯ್‌ಕುಮಾರ್ ಭಾಗವಹಿಸಿ ನೂತನ ಸಾಲಿನ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಲಿದ್ದಾರೆ. ಜೇಸಿಐ ವಲಯ ಉಪಾಧ್ಯಕ್ಷ ಜಗದೀಶ್, ಜೇಸಿಐ ಅಧ್ಯಕ್ಷ ಎಸ್.ಆರ್.ವಸಂತ್, ಮಾಜಿ ಅಧ್ಯಕ್ಷರಾದ ಎಂ.ಎ.ರುಬೀನಾ, ಕಾರ್ಯದರ್ಶಿ ವಿನುತಾ ಸುದೀಪ್, ಮಹಿಳಾ ಜೇಸಿ ಅಧ್ಯಕ್ಷೆ ಜ್ಯೋತಿ ರಾಜೇಶ್, ಜೆಜೆಸಿ ಅಧ್ಯಕ್ಷೆ ದಿಶಾ ಗಿರೀಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.