

ಗುರುಪುರ: ಮಂಗಳೂರು ತಾಲೂಕಿನ ಪಡುಪೆರಾರ ಪಂಚಾಯಿತಿ ವ್ಯಾಪ್ತಿಯ ಶ್ರೀ ಕ್ಷೇತ್ರ ಬ್ರಹ್ಮ ಬಲವಾಂಡಿ ದೈವಸ್ಥಾನಕ್ಕೆ ಹತ್ತಿರದಲ್ಲಿ 1 ಕೋಟಿ 60 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲಾದ ಕುಡುಮದ ಅಣೆಕಟ್ಟನ್ನು ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟಿಸಿದರು.
ಶಾಸಕರು ತಮ್ಮ ಪ್ರಥಮ ಅವಧಿಯಲ್ಲಿ ಪಡುಪೆರಾರ ಪಂಚಾಯಿತಿ ವ್ಯಾಪ್ತಿಯ ವಿವಿಧ ಅಣೆಕಟ್ಟು ನಿರ್ಮಾಣ, ಅಭಿವೃದ್ಧಿ ಕಾಮಗಾರಿಗೆ 9 ಕೋಟಿ ರೂ. ಅನುದಾನ ಒದಗಿಸಿದ್ದರು. ಇಲ್ಲಿನ ಜನರಿಗೆ ಕುಡಿಯುವ ನೀರು, ಕೃಷಿ ಕಾರ್ಯಗಳಿಗೆ ನೀರು ಪೂರೈಸುವ ನಿಟ್ಟಿನಲ್ಲಿ ಕೈಗೆತ್ತಿಕೊಳ್ಳಲಾದ ಈ ಯೋಜನೆ ಪೂರ್ಣಗೊಳಿಸುವಲ್ಲಿ ಮುತುವರ್ಜಿ ವಹಿಸಿರುವ ಶಾಸಕ ಡಾ.ಭರತ್ ಶೆಟ್ಟಿ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.
‘ನಮೋ ನಂದಿನಿ’ ವಿಶೇಷ ಕಾರ್ಯಕ್ರಮದೊಂದಿಗೆ ಅಣೆಕಟ್ಟು ಉದ್ಘಾಟಿಸಲಾಯಿತು. ಪಡುಪೆರಾರ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.