ಪಂಚಾಯತ್‌ರಾಜ್ ಕಚೇರಿ ಉದ್ಘಾಟನೆ: ಖಾಲಿ ಹುದ್ದೆ ಭರ್ತಿಗೆ ಸಚಿವರಿಗೆ ಮನವಿ

New Project (2)
Published on

ಸುಳ್ಯ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ದಕ್ಷಿಣ ಕನ್ನಡ ವಿಭಾಗದ ಸುಳ್ಯ ತಾಲೂಕು ಪಂಚಾಯತ್‌ರಾಜ್ ಇಂಜಿನಿಯರಿಂಗ್ ವಿಭಾಗದ ನೂತನ ಕಚೇರಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದಲ್ಲಿ ಮತ್ತು ಗ್ರಾಮೀಣ ಕುಡಿಯುವ ನೀರು ವಿಭಾಗಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಮನವಿ ಸಲ್ಲಿಸಲಾಯಿತು.

ನಪಂ ಅಧ್ಯಕ್ಷೆ ಶಶಿಕಲಾ ಎ., ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಪುತ್ತೂರು ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗೀಸ್, ತಹಸೀಲ್ದಾರ್ ಮಂಜುಳಾ, ತಾಪಂ ಇಒ ರಾಜಣ್ಣ, ಪಂಚಾಯತ್‌ರಾಜ್ ಇಂಜಿನಿಯರಿಂಗ್ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚೈತ್ರಾ ಎಸ್.ಆರ್., ಸಹಾಯಕ ಇಂಜಿನಿಯರ್ ಮಣಿಕಂಠನ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಜನಾರ್ದನ್, ಮುಖಂಡರಾದ ಧನಂಜಯ ಅಡ್ಪಂಗಾಯ, ಟಿ.ಎಂ.ಶಹೀದ್ ತೆಕ್ಕಿಲ್, ಜಿ.ಕೃಷ್ಣಪ್ಪ, ಪಿ.ಸಿ.ಜಯರಾಮ, ರಾಧಾಕೃಷ್ಣ ಬೊಳ್ಳೂರು, ನಿತ್ಯಾನಂದ ಮುಂಡೋಡಿ, ಪಿ.ಎಸ್.ಗಂಗಾಧರ, ಕೆ.ಗೋಕುಲ್‌ದಾಸ್, ಮಹಮ್ಮದ್ ಕುಂಞ್ಞೆ, ಗೂನಡ್ಕ, ಧರ್ಮಪಾಲ ಕೊಯಿಂಗಾಜೆ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net