ಪುತ್ತೂರು ಶಾಸಕರ ಕಚೇರಿ ಉದ್ಘಾಟನೆ

puttur
ಪುತ್ತೂರು ಶಾಸಕರ ಕಚೇರಿ ಆವರಣದಲ್ಲಿ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ಶಾಸಕ ಅಶೋಕ್ ಕುಮಾರ್ ರೈ ವಿತರಿಸಿದರು.
Published on

ಪುತ್ತೂರು: ತಾಲೂಕು ಆಡಳಿತ ಸೌಧದ ಪಕ್ಕದಲ್ಲಿರುವ ನಗರಸಭೆ ಕಟ್ಟಡದಲ್ಲಿ ಶಾಸಕರ ಕಚೇರಿಯನ್ನು ಶಾಸಕ ಅಶೋಕ್ ಕುಮಾರ್ ರೈ ದಂಪತಿ ಸೋಮವಾರ ಉದ್ಘಾಟಿಸಿದರು.

ಗಣಪತಿ ಹವನ ಸಹಿತ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಕಚೇರಿ ಆವರಣದಲ್ಲಿ ನಡೆದ ಫಲಾನುಭವಿಗಳ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಕ್ಷೇತ್ರ ವ್ಯಾಪ್ತಿಯ 150 ಮಂದಿ ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿ ಹಕ್ಕುಪತ್ರ ವಿತರಿಸಲಾಯಿತು.


ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ಕೆ.ಬಿ.ರಾಜಾರಾಂ, ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಸೀಲ್ದಾರ್ ಶಿವಶಂಕರ್, ಶಾಸಕರ ಪತ್ನಿ ಸುಮಾ ಅಶೋಕ್ ರೈ ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net