ವಲಯಮಟ್ಟದ ಕ್ರೀಡಾಕೂಟ ಉದ್ಘಾಟನೆ

Btw_Sports
Published on

ಬಂಟ್ವಾಳ: ದ.ಕ.ಜಿ.ಪಂ. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಎಸ್.ವಿ.ಎಸ್ ವಿದ್ಯಾಸಂಸ್ಥೆ ಬಂಟ್ವಾಳ ಆಶ್ರಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಬಂಟ್ವಾಳ ವಲಯಮಟ್ಟದ ಎರಡು ದಿನಗಳ ಕ್ರೀಡಾಕೂಟ, ಎಸ್.ವಿ.ಎಸ್ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಪುಂಡಲೀಕ ಬಾಳಿಗ ಕ್ರೀಡಾಕೂಟ ಉದ್ಘಾಟಿಸಿ ಶುಭಹಾರೈಸಿದರು. ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಳದ ಆಡಳಿತ ಮೊಕ್ತೇಸರ ಅಶೋಕ್ ಶೆಣೈ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ಸಂಚಾಲಕ ಭಾಮಿ ನಾಗೇಂದ್ರನಾಥ ಶೆಣೈ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಎಂ.ಜಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಕ್ಷ್ಮೀ ನಾರಾಯಣ ಮಲ್ಯ, ಕಾರ್ಯದರ್ಶಿ ಸರ್ವೋತ್ತಮ ಬಾಳಿಗಾ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಪ್ರಸಾದ್ ರೈ, ವಲಯ ದ ನೋಡಲ್ ಜಗದೀಶ್ ರೈ ತುಂಬೆ, ಎಸ್.ವಿ.ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ರೋಶನಿ ತಾರಾ ಡಿಸೋಜ, ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಹಾಸ ಶೆಟ್ಟಿ, ವೇದಾವತಿ ಮತ್ತಿತರರು ಉಪಸ್ಥಿತರಿದ್ದರು.

ಎಸ್‌ವಿಎಸ್ ದೇವಳ ಕನ್ನಡ ಮಾಧ್ಯಮ ಶಾಲಾ ಮುಖ್ಯಶಿಕ್ಷಕಿ ಸುರೇಖಾ ಕೆ. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ದಿನೇಶ್ ಕುಮಾರ್ ವಂದಿಸಿದರು. ಶಿಕ್ಷಕ ಮುರಳೀಧರ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net