

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ಹೊಲಿಗೆ ತರಬೇತಿ ಕೇಂದ್ರದ ಉದ್ಘಾಟನೆ ನೆಲ್ಯಾಡಿ ಸಿರಿ ಘಟಕದಲ್ಲಿ ಇತ್ತೀಚೆಗೆ ನಡೆಯಿತು.
ಜನಜಾಗೃತಿ ವೇದಿಕೆ ನೆಲ್ಯಾಡಿ ವಲಯ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಉದ್ಘಾಟಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಉತ್ತಮ ಕಾರ್ಯಕ್ರಮ ನೀಡುತ್ತಿದೆ. ಹೊಲಿಗೆ ತರಬೇತಿಯನ್ನು ಆಯೋಜಿಸಿ ಸ್ವಾವಲಂಬಿ ಜೀವನ ನಡೆಸಲು ಪ್ರೇರಣೆ ನೀಡಿದ್ದು ಹೆಮ್ಮೆಯ ವಿಚಾರ ಎಂದರು.
ಕೌಕ್ರಾಡಿ ಒಕ್ಕೂಟ ಅಧ್ಯಕ್ಷ ಬಾಲಕೃಷ್ಣ ಗೌಡ ಅಧ್ಯಕ್ಷತೆ ವಹಿಸಿದರು. ನೆಲ್ಯಾಡಿ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ರಮೇಶ್ ಬಾಣಜಾಲು, ವಲಯ ಮೇಲ್ವಿಚಾರಕ ಆನಂದ ಡಿ.ಬಿ, ಹೊಲಿಗೆ ತರಬೇತಿ ಶಿಕ್ಷಕಿ ಗೀತಾ, ನೆಲ್ಯಾಡಿ ಒಕ್ಕೂಟದ ಉಪಾಧ್ಯಕ್ಷ ಸುಮಿತ್ರಾ ಉಪಸ್ಥಿತರಿದ್ದರು.
ಕಡಬ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಚೇತನಾ ಪ್ರಸ್ತಾಪಿಸಿದರು. ಸೇವಾ ಪ್ರತಿನಿಧಿ ಹೇಮಾವತಿ ಜೆ. ಕಾರ್ಯಕ್ರಮ ನಿರೂಪಿಸಿದರು. ನಮಿತಾ ಎಸ್.ನೆಟ್ಟಿ ವಂದಿಸಿದರು. ವಲಯದ ಸೇವಾ ಪ್ರತಿನಿಧಿಗಳಾದ ವೇದಾ ಪಿ, ಕವಿತಾ, ಸುಮನಾ ಸಹಕರಿಸಿದರು. ಹೊಲಿಗೆ ತರಬೇತಿ ಪಡೆಯಲು ಬಂದ ಸದಸ್ಯರು ಉಪಸ್ಥಿತರಿದ್ದರು.