

ಬೆಳ್ತಂಗಡಿ: ಯಾವುದೇ ವಿದ್ಯಾಸಂಸ್ಥೆಯ ಏಳಿಗೆಯಲ್ಲಿ ವಿದ್ಯಾರ್ಥಿ ಸಂಘದ ಪಾತ್ರ ಹಿರಿದು. ವಿದ್ಯಾರ್ಥಿ ಸಂಘವು ವಿದ್ಯಾರ್ಥಿಗಳ ಹಾಗೂ ವಿದ್ಯಾಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ನಡ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಲಿಲ್ಲಿ ಪಿ.ವಿ. ಹೇಳಿದರು.
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಪನ್ಯಾಸಕಿ ಅನುಷಾ ಡಿ.ಜೆ. ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಸಂಘ ಸಂಯೋಜಕ ತಿರುಮಲೇಶ್ ರಾವ್ ಎನ್.ಕೆ., ನಾಯಕಿ ವೀಕ್ಷದೀಪ ಆರ್.ಎಸ್., ಕಾರ್ಯದರ್ಶಿ ದೀಕ್ಷಿತ್ ಎಂ, ಪ್ರಾಂಶುಪಾಲ ಸಂತೋಷ್ ಸಲ್ಡಾನ, ಉಪನ್ಯಾಸಕಿ ವಿದ್ಯಾಶ್ರೀ ಪಿ, ಮಂಜು ಆರ್, ಪ್ರಿಯದರ್ಶಿನಿ ಜಿ.ಭಟ್, ಆದ್ಯಾ, ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಸಂತೋಷ್ ಟಿ.ಯು. ಸ್ವಾಗತಿಸಿ, ವಿಶ್ಮಿತಾ ಅತಿಥಿಗಳನ್ನು ಪರಿಚಯಿಸಿದರು. ವಿಶಾಲ ವಂದಿಸಿದರು. ಫಾತಿಮಾತ್ ರಾಫಿಯಾ ಕಾರ್ಯಕ್ರಮ ನಿರೂಪಿಸಿದರು.