

ಕುಂಬಳೆ: ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ನೂತನ ತರಗತಿ ಕಟ್ಟಡವನ್ನು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಉದ್ಘಾಟಿಸಿದರು. ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ.ಸುಬ್ಬಣ್ಣ ಆಳ್ವ ಅಧ್ಯಕ್ಷತೆ ವಹಿಸಿದ್ದರು.
ನಿವೃತ್ತ ಡಿಡಿಇ ನಂದಿಕೇಶನ್ ಅವರನ್ನು ಸನ್ಮಾನಿಸಲಾಯಿತು. ಕಾಸರಗೋಡು ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣ ನಾಯ್ಕ, ಪುತ್ತಿಗೆ ಗ್ರಾಮ ಪಂಚಾಯಿತಿ ಸದಸ್ಯೆ ಅನಿತಾಶ್ರೀ, ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ ವಿ., ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಶಶಿಧರ ಎಂ., ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಬಾಬು ಪಿ., ಮಾತೃಸಂಘದ ಅಧ್ಯಕ್ಷೆ ಆಶಿಯತ್ ಅಸೀದ ಎ.ಎಂ., ಗುತ್ತಿಗೆದಾರ ಮೊಹಮ್ಮದ್ ಅಶ್ರಫ್, ಸಿಪಿಎಂ ಲೋಕಲ್ ಏರಿಯ ಸೆಕ್ರೆಟರಿ ಅಬ್ದುಲ್ ಹಕೀಂ, ಬಿಜೆಪಿ ಮಂಡಲಾಧ್ಯಕ್ಷ ಸುನಿಲ್ ಅನಂತಪುರ ಶುಭಾಶಂಸನೆಗೈದರು. ಮುಖ್ಯಶಿಕ್ಷಕಿ ಸುನೀತ ಎಂ ಸ್ವಾಗತಿಸಿ, ನೌಕರರ ಸಂಘದ ಕಾರ್ಯದರ್ಶಿ ಕಿರಣ್ ಕೆ. ವಂದಿಸಿದರು. ಗೀತ ಕೆ. ಕಾರ್ಯಕ್ರಮ ನಿರ್ವಹಿಸಿದರು.